ಕರ್ನಾಟಕ ಲೋಕಸೇವಾ ಆಯೋಗದಿಂದ ಪೊಲೀಸ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ಪೊಲೀಸ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಪ್ರಕಟ

KPSC Recruitment 2022: ಕರ್ನಾಟಕ ಲೋಕಸೇವಾ ಆಯೋಗವು ಪೊಲೀಸ್ ಇಲಾಖೆಯಲ್ಲಿನ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕಗಳಲ್ಲಿ ಖಾಲಿ ಇರುವ ಗ್ರೂಪ್ ‘ಎ’ ವೃಂದದ ವಿವಿಧ ವಿಭಾಗಗಳಲ್ಲಿ ಸಹಾಯಕ ನಿರ್ದೇಶಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಇದೀಗ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

 

ಇಲಾಖೆ ಹೆಸರು:ಕರ್ನಾಟಕ ಲೋಕಸೇವಾ ಆಯೋಗ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 10
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ಹುದ್ದೆಗಳ ವಿವರ 

* ವಿಷವಿಜ್ಞಾನ ವಿಭಾಗ – 02 & ಹೈ.ಕ – 01
* ಜೀವಶಾಸ್ತ್ರ ವಿಭಾಗ – 02
* ಡಿಎನ್ ಎ ವಿಭಾಗ – 01
* ರಸಾಯನಿಕ ವಿಭಾಗ – 02
* ಪ್ರಶ್ನಿತ ದಸ್ತಾವೇಜು ವಿಭಾಗ – 01
ಒಟ್ಟು ಹುದ್ದೆಗಳು 10

 

 

ವಿದ್ಯಾರ್ಹತೆ:
ವಿಷ ವಿಜ್ಞಾನ ವಿಭಾಗ : ವಿಷ ವಿಜ್ಞಾನ ಪದವಿ ಉತ್ತೀರ್ಣರಾಗಿರಬೇಕು 
ಜೀವಶಾಸ್ತ್ರ ವಿಭಾಗ: ಜೀವಶಾಸ್ತ್ರ ಪದವಿ ಉತ್ತೀರ್ಣರಾಗಿರಬೇಕು 
ಡಿಎನ್‌ಎ ವಿಭಾಗ: ಡಿಎನ್‌ಎ ಪದವಿ ಉತ್ತೀರ್ಣರಾಗಿರಬೇಕು 
ರಸಾಯನಿಕ ವಿಭಾಗ: ರಸಾಯನಿಕ ವಿಜ್ಞಾನ ಪದವಿ ಉತ್ತೀರ್ಣರಾಗಿರಬೇಕು 
ಪ್ರಶ್ನಿತ ದಸ್ತಾವೇಜು ವಿಭಾಗ: ಪ್ರಶ್ನಿತ ದಸ್ತಾವೇಜು ಸಂಬಂಧಿಸಿದ ಪದವಿ ಉತ್ತೀರ್ಣರಾಗಿರಬೇಕು 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
– ಎಸ್ಸಿ ಎಸ್ಟಿ ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 52650 – 97100 ರವರೆಗೆ ವೇತನ ಪಡೆಯಲಿದ್ದಾರೆ.

ಅರ್ಜಿ ಶುಲ್ಕ:
* ಸಾಮಾನ್ಯ ವರ್ಗ ಸೇರಿದ ಅಭ್ಯರ್ಥಿಗಳಿಗೆ ₹600/-
* ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ₹300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹50/-
* ಎಸ್ಸಿ ಎಸ್ಟಿ ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿ ಇಂದ ವಿನಾಯಿತಿ ಇರುತ್ತದೆ.

ಅನುಭವ:
ಸದರಿ ಹುದ್ದೆಗಳಿಗೆ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಅನುಭವಗಳನ್ನು ನಿಗದಿಪಡಿಸಿದ್ದು, ಈ ಸಂಬಂಧ ಅಧಿಸೂಚನೆಯಲ್ಲಿ ತೋರಿಸಿರುವ ನಮೂನೆಯಲ್ಲಿಯೇ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಅನುಭವ ಪ್ರಮಾಣ ಪತ್ರವನ್ನು ಪಡೆದುಕೊಂಡು ಕಡ್ಡಾಯವಾಗಿ ಅಪ್‌ಲೋಡ್‌ ಮಾಡಬೇಕು.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 16 ಮಾರ್ಚ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 18 ಎಪ್ರಿಲ್ 2022
ಶುಲ್ಕ ಪಾವತಿ ಕೊನೆಯ ದಿನಾಂಕ 19 ಎಪ್ರಿಲ್ 2022
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

 

error: Content is protected !!