ಜಲ ಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಅಭಿಯಂತರರು ಹುದ್ದೆಗಳ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

 

 

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 24-06-2020 ರಲ್ಲಿ ಅಧಿಸೂಚಿಸಲಾದ ಜಲ ಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಅಭಿಯಂತರರು (Assistant Engineers) ಡಿವಿಷನ್-1 (ಸಿವಿಲ್) 181 (HK) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸಿದ್ಧಪಡಿಸಿ ಅಭ್ಯರ್ಥಿಗಳ ಮಾಹಿತಿಗಾಗಿ ಇದೀಗ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ನೇಮಕ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಅಭ್ಯರ್ಥಿಗಳು ಫಲಿತಾಂಶವನ್ನು ಕೆಪಿಎಸ್‌ಸಿ ವೆಬ್‌ಸೈಟ್‌ಗೆ ಭೇಟಿ ನೀಡಿ ಚೆಕ್‌ ಮಾಡಬಹುದು.

ಸದರಿ ತಾತ್ಕಾಲಿಕ ಆಯ್ಕೆಪಟ್ಟಿಗೆ ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ ಆಯ್ಕೆಪಟ್ಟಿ ಪ್ರಕಟಿಸಿರುವ ದಿನಾಂಕದಿಂದ ಅಂದರೆ ನವೆಂಬರ್ 29 ರಿಂದ 7 ದಿನಗಳೊಳಗಾಗಿ ಸಲ್ಲಿಸಲು ಕೆಪಿಎಸ್‌ಸಿ ಸೂಚಿಸಿದೆ.

 

 

 

ಆಕ್ಷೇಪಣೆ ಸಲ್ಲಿಸಲು ವಿಳಾಸ : ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-560001.

Download Selection List
error: Content is protected !!