ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ನೇಮಕಾತಿ 2021


ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ, ಬೆಂಗಳೂರು, ಬೆಳಗಾವಿ ಮತ್ತು ಕಲಬುರಗಿ ಪೀಠಗಳಲ್ಲಿ ಪ್ರಸ್ತುತ ಖಾಲಿ ಇರುವ ಉಳಿದ ಮೂಲ ವೃಂದ ಮತ್ತು ಸ್ಥಳೀಯ ವೃಂದದ ಶೀಘ್ರಲಿಪಿಗಾರ ಹುದ್ದೆಗಳನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಹುದ್ದೆಗಳ ವಿವರ :

ಶೀಘ್ರಲಿಪಿಗಾರರು – 13 ಹುದ್ದೆಗಳು 

ಬೆರಳಚ್ಚುಗಾರರು – 03 ಹುದ್ದೆಗಳು)

 

 

ಒಟ್ಟು ಹುದ್ದೆಗಳು: 16

ವಿದ್ಯಾರ್ಹತೆ:
1. ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
2. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಪರೀಕ್ಷೆ ಪ್ರೌಢದರ್ಜೆ (ಸೀನಿಯರ್ ಗ್ರೇಡ್) ಹಾಗೂ ಆಂಗ್ಲ ಮತ್ತು ಕನ್ನಡ ಭಾಷೆಯ ಶೀಘ್ರಲಿಪಿ ಪ್ರೌಢದರ್ಜೆ (ಸೀನಿಯರ್ ಗ್ರೇಡ್) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿಸಿದೆ. ಇತರೆ ಪ್ರವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ.150/- ಗಳನ್ನು (ಒಂದುನೂರ ಐವತ್ತು ರೂಪಾಯಿ) ಐಪಿಒ/ಡಿಡಿ ಮೂಲಕ ವಿಲೇಖನಾಧಿಕಾರಿ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ ಭವನ, 7ನೇ ಮಹಡಿ, ಕೆ.ಜಿ.ರಸ್ತೆ, ಬೆಂಗಳೂರು-560 009 ಇವರ ಪದನಾಮಕ್ಕೆ ಸಂದಾಯವಾಗುವಂತೆ ಪಡೆದು ಅರ್ಜಿಯೊಂದಿಗೆ ಲಗತ್ತಿಸತಕ್ಕದ್ದು.

 

 

ವಯೋಮಿತಿ:
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು ಮತ್ತು ಈ ಕೆಳಗಿನಂತೆ ವರ್ಗಾವಾರು ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.

– ಸಾಮಾನ್ಯ ವರ್ಗ: 35 ವರ್ಷಗಳು

– ಪ.ಜಾ/ಪ.ಪಂ/ಪ್ರ-1 : 40 ವರ್ಷಗಳು

– 2ಎ, 2ಬಿ, 3ಎ, 3ಬಿ: 38 ವರ್ಷಗಳು

 

 

ವೇತನ ಶ್ರೇಣಿ: ರೂ. 30350-750-32600-850-36000-950-39800-1100-46400-1250-539001450-58250.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 27 ಜನವರಿ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25 ಫೆಬ್ರುವರಿ 2021

ಶೀಘ್ರಲಿಪಿಗಾಗರುಅರ್ಜಿ ಫಾರ್ಮ್  – ಅಧಿಸೂಚನೆ 
ಬೆರಳಚ್ಚುಗಾರರುಅರ್ಜಿ ಫಾರ್ಮ್ಅಧಿಸೂಚನೆ 
error: Content is protected !!