ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ನೇಮಕಾತಿ 2022
KSAT Recruitment 2022 : ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಕಛೇರಿಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ |
ಹುದ್ದೆಗಳ ಹೆಸರು: | 07 |
ಒಟ್ಟು ಹುದ್ದೆಗಳು | ದಲಾಯತ್ (ಗ್ರೂಪ್ ಡಿ) |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ |
ವಿದ್ಯಾರ್ಹತೆ:
ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಕಛೇರಿ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅಭ್ಯರ್ಥಿಯು 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು
ವಯೋಮಿತಿ:
ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಕಛೇರಿ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ,
ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ,
ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವೇತನಶ್ರೇಣಿ:
ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಕಛೇರಿ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 ದಿಂದ ರೂ. 28,950ವರೆಗೂ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಕಛೇರಿ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಪ.ಜಾತಿ, ಪ.ಪಂ., ಪ್ರ 1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿಸಿದೆ. ಇತರೆ ಅಭ್ಯರ್ಥಿಗಳು ರೂ. 150 ಗಳನ್ನು ಡಿಡಿ ಮೂಲಕ “ವಿಲೇಖನಾಧಿಕಾರಿ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ ಭವನ, 7ನೇ ಮಹಡಿ, ಕೆ.ಜಿ.ರಸ್ತೆ, ಬೆಂಗಳೂರು – 560009” ಇವರ ಹೆಸರಿಗೆ ಸಂದಾಯವಾಗುವಂತೆ ಪಡೆದು ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು.
ಆಯ್ಕೆ ವಿಧಾನ
ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಕಛೇರಿ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಸಂದರ್ಶನವು ಗರಿಷ್ಠ 30 ಅಂಕಗಳನ್ನು ಒಳಗೊಂಡಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
ವಿಲೇಖನಾಧಿಕಾರಿ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ,
ಕಂದಾಯ ಭವನ, 7ನೇ ಮಹಡಿ, ಕೆ.ಜಿ. ರಸ್ತೆ, ಬೆಂಗಳೂರು – 560009
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಫೆಬ್ರುವರಿ 09, 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಫೆಬ್ರುವರಿ 25, 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | Click Here |
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ | Click Here |