ಹೊಸ ನೇಮಕಾತಿ ಅಧಿಸೂಚನೆ 2023
ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯು ಬೆಂಗಳೂರು, ಬೆಳಗಾವಿ ಮತ್ತು ಕಲಬುರಗಿ ಪೀಠಗಳಲ್ಲಿ ಖಾಲಿ ಇರುವ 7 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಉದ್ಯೋಗ ಸುದ್ದಿ – 7ನೇ, 10ನೇ, ಐಟಿಐ ಡಿಪ್ಲೋಮ ಪದವಿ ಪಾಸಾದವರಿಗೆ ವಿವಿಧ ಖಾಲಿ ಹುದ್ದೆಗಳು
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
KSAT Recruitment 2023 – ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯು ಬೆಂಗಳೂರು, ಬೆಳಗಾವಿ ಮತ್ತು ಕಲಬುರಗಿ ಪೀಠಗಳಲ್ಲಿ ಖಾಲಿ ಇರುವ 7 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ – KSAT |
ಹುದ್ದೆಗಳ ಹೆಸರು: | ಶೀಘ್ರಲಿಪಿಗಾರ ಹುದ್ದೆಗಳು |
ಒಟ್ಟು ಹುದ್ದೆಗಳು | 08 |
ಅರ್ಜಿ ಸಲ್ಲಿಸುವ ಬಗೆ | ಆಫ್ ಲೈನ್ |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ(10ನೇ), ಪಿ.ಯು.ಸಿ.(12ನೇ) ವಿದ್ಯಾರ್ಹತೆಯನ್ನು ಹೊಂದಿರಬೇಕು.
ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲಭಾಷಾ ಬೆರಳಚ್ಚು ಪರೀಕ್ಷೆ ಪ್ರೌಢದರ್ಜೆ , ಕನ್ನಡ ಮತ್ತು ಆಂಗ್ಲಭಾಷಾ ಶೀಘ್ರಲಿಪಿ ಪ್ರೌಢದರ್ಜೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಉದ್ಯೋಗ ಸುದ್ದಿ – ಬಿಬಿಎಂಪಿ ಯಲ್ಲಿ ಡಿ ಗ್ರೂಪ್ ಹುದ್ದೆಗಳ ಬೃಹತ್ ನೇಮಕಾತಿ 2023
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
– ಎಸ್ಸಿ/ಎಸ್ಟಿ ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ.30,350 /- ರೂ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 150 ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸತಕ್ಕದ್ದು.
ಎಸ್ಸಿ/ಎಸ್ಟಿ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಇರಲಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನಿಗದಿ ಪಡಿಸಿದ ಪರೀಕ್ಷೆಯಲ್ಲಿ ಆಡಿದ ಒಟ್ಟು ಶೇಕಡಾ ಅಂಕಗಳ ಆಧಾರದ ಮೇಲೆ ಮತ್ತು ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಸಮಿತಿಯು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
ವಿಲೇಖನಾಧಿಕಾರಿಗಳು, ಕರ್ನಾಟಕ ರಾಜ್ಯ ನ್ಯಾಯ ಆಡಳಿತಮಂಡಳಿ,
ಕಂದಾಯ ಭವನ, 7 ನೇ ಮಹಡಿ, ಕೆಂಪೇಗೌಡ ರಸ್ತೆ, ಬೆಂಗಳೂರು -560009
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 14 ಜನವರಿ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 31 ಜನವರಿ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ – 1 | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ – 2 | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಫಾರ್ಮ್ – 1 | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಫಾರ್ಮ್ – 2 | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |