ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 4000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಅಹ್ವಾನ

ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಕನಸು ಹೊಂದಿರುವವರಿಗೆ ಸುವರ್ಣಾವಕಾಶ ಒದಗಿಬಂದಿದ್ದು, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 4000 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.

ಹುದ್ದೆಗಳ ವಿವಿಧ ಈ ಕೆಳಗಿನಂತಿವೆ 
ಬೆಂಗಳೂರು (ನಗರ) 1500 ಹುದ್ದೆಗಳು
ಮೈಸೂರು (ನಗರ) 180 ಹುದ್ದೆಗಳು
ಹುಬ್ಬಳ್ಳಿ- ಧಾರವಾಡ 200 ಹುದ್ದೆಗಳು
ಮಂಗಳೂರು 155 ಹುದ್ದೆಗಳು
ಬೆಳಗಾವಿ 150 ಹುದ್ದೆಗಳು
ಬೆಂಗಳೂರು (ಜಿಲ್ಲೆ) 135 ಹುದ್ದೆಗಳು
ತುಮಕೂರು 126 ಹುದ್ದೆಗಳು
ಚಿಕ್ಕಬಳ್ಳಾಪುರ 110 ಹುದ್ದೆಗಳು



ರಾಮನಗರ 130 ಹುದ್ದೆಗಳು
ಮೈಸೂರು (ಜಿಲ್ಲೆ) 115 ಹುದ್ದೆಗಳು
ಚಾಮರಾಜನಗರ 65 ಹುದ್ದೆಗಳು
ಹಾಸನ 105 ಹುದ್ದೆಗಳು
ಕೊಡಗು 55 ಹುದ್ದೆಗಳು
ಮಂಡ್ಯ 145 ಹುದ್ದೆಗಳು
ಶಿವಮೊಗ್ಗ 180 ಹುದ್ದೆಗಳು
ಚಿತ್ರದುರ್ಗ 70 ಹುದ್ದೆಗಳು
ದಕ್ಷಿಣ ಕನ್ನಡ ಮಂಗಳೂರು 75 ಹುದ್ದೆಗಳು
ಉಡುಪಿ 90 ಹುದ್ದೆಗಳು
ಉತ್ತರ ಕನ್ನಡ 130 ಹುದ್ದೆಗಳು
ಚಿಕ್ಕಮಗಳೂರು 57 ಹುದ್ದೆಗಳು
ಬೆಳಗಾವಿ 78 ಹುದ್ದೆಗಳು
ಗದಗ 79 ಹುದ್ದೆಗಳು
ರೈಲ್ವೆ ಬೆಂಗಳೂರು 70 ಹುದ್ದೆಗಳು

ಒಟ್ಟು ಹುದ್ದೆಗಳು: 4000

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆಯಿಂದ ಪಡೆದಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 25 ಜೂನ್ 2021ಕ್ಕೆ ಅನ್ವಯಿಸುವಂತೆ ಕನಿಷ್ಟ 19 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿಯು

– ಸಾಮಾನ್ಯ ಅಭ್ಯರ್ಥಿಗಳಿಗೆ 25 ವರ್ಷ
– ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ 27 ವರ್ಷ
– ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷಗಳವರೆಗೆ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

* ತತ್ಸಮಾನ ವಿದ್ಯಾರ್ಹತೆಗಳು :
1. ಸಿ.ಬಿ.ಎಸ್.ಇ ಮತ್ತು ಐ.ಎಸ್.ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ.
2. ಇತರೆ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ಪರೀಕ್ಷೆ.
3. ನ್ಯಾಷನಲ್ ಇನ್ಸ್‍ಸ್ಟಿಟೂಟ್ ಆಫ್ ಓಪನ್ ಸ್ಕೂಲಿಂಗ್(ಎನ್.ಐ.ಓ.ಎಸ್) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್/ಹೆಚ್.ಎಸ್.ಸಿ.
4. ಮೂರು ವರ್ಷಗಳ ಡಿಪ್ಲೊಮಾ ಆಥವಾ ಎರಡು ವರ್ಷಗಳ ಐ.ಟಿ.ಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೊಮಾ (ಜೆ.ಓ.ಸಿ/ಜೆ.ಓ.ಡಿ.ಸಿ/ಜೆ.ಎಲ್.ಡಿ.ಸಿ) ಅಭ್ಯರ್ಥಿಗಳು ಎನ್.ಐ.ಒ.ಎಸ್ ನ ವತಿಯಿಂದ ನಡೆಸುವ ಒಂದು ಭಾಷಾ ಕೋರ್ಸ್ ಮತ್ತು ಒಂದು ಶೈಕ್ಷಣಿಕ ವಿಷಯದಲ್ಲಿ (ದೂರಕಲಿಕೆ ಮಾದರಿಯಲ್ಲಿ) ಅಥವಾ ಪದವಿಪೂರ್ವ ಮಂಡಳಿಯು ನಡೆಸುವ ಪರೀಕ್ಷೆಯಲ್ಲಿ ಒಂದು ಭಾಷೆ ಮತ್ತು ಒಂದು ವಿಷಯದಲ್ಲಿ ಉತ್ತೀರ್ಣರಾದಲ್ಲಿ ಮಾತ್ರ ಪಿ.ಯು.ಸಿಗೆ ತತ್ಸಮಾನ.

ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ 400 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ 200 ಅರ್ಜಿಯ ಶುಲ್ಕವನ್ನು ನಿಗದಿಪಡಿಸಲಾಗಿದೆ.

ವೇತನ ಶ್ರೇಣಿ:
₹23500-550-24600-600-27000-650-29600-750-32600-850-36000-950-39800-1100-46400-1250-47650.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳನ್ನು ಮೊದಲು ಲಿಖಿತ ಪರೀಕ್ಷೆ ನಡೆಸಿ ನಂತರ 1:5 ರ ಅರ್ಹತೆ ಆಧಾರದ ಮೇಲೆ ದೈಹಿಕ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು. ಈ ಕುರಿತು ವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಬಹುದು

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25 ಮೇ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12 ಜುಲೈ 2021
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 14 ಜುಲೈ 2021

Website 
Notification 
Application form 
error: Content is protected !!