ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಸಬ್ ಇನ್ಸ್ಪೆಕ್ಟರ್ ಖಾಲಿ ಹುದ್ದೆಗಳ ಭರ್ತಿ 2022

ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆ ನೇಮಕಾತಿ ಅಧಿಸೂಚನೆ 2022

ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆಯಲ್ಲಿನ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ಕೆ.ಎಸ್.ಐ.ಎಸ್.ಎಫ್) ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

 

 

ಇಲಾಖೆ ಹೆಸರು:ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆ
ಹುದ್ದೆಗಳ ಹೆಸರು:ಸಬ್‌ ಇನ್ಸ್‌ಪೆಕ್ಟರ್
ಒಟ್ಟು ಹುದ್ದೆಗಳು 63 
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

 

ವಿದ್ಯಾರ್ಹತೆ:
ಕರ್ನಾಟಕ ರಾಜ್ಯ ಪೊಲೀಸ್ಆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಯು.ಜಿ.ಸಿ. ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 03.03.2022ಕ್ಕೆ ಹೊಂದಿರಬೇಕು.

ವಯೋಮಿತಿ:
ಕರ್ನಾಟಕ ರಾಜ್ಯ ಪೊಲೀಸ್ಆ ಇಲಾಖೆ ದಿನಾಂಕ 03 ಮಾರ್ಚ್, 2022ಕ್ಕೆ ಅಭ್ಯರ್ಥಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು ಹಾಗೂ ಪ.ಜಾತಿ/ಪ.ಪಂ/ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷ, ಇತರೆ ಅಭ್ಯರ್ಥಿಗಳಿಗೆ ಗರಿಷ್ಠ 26 ವರ್ಷ ನಿಗದಿಪಡಿಸಲಾಗಿದೆ.

 

 

ವೇತನಶ್ರೇಣಿ:
ಕರ್ನಾಟಕ ರಾಜ್ಯ ಪೊಲೀಸ್ಆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 37,900 ರಿಂದ ರೂ. 70,850 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಕರ್ನಾಟಕ ರಾಜ್ಯ ಪೊಲೀಸ್ಆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ರೂ. 500

ಎಸ್ಸಿ, ಎಸ್ಟಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ ರೂ. 250

ಶುಲ್ಕ ಪಾವತಿಸುವ ವಿಧಾನ : ನಿಗದಿತ ಶುಲ್ಕವನ್ನು ನಗದು ಅಥವಾ ಆನ್‌ಲೈನ್‌ ರೂಪದಲ್ಲಿ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಬೇಕು

ಆಯ್ಕೆ ವಿಧಾನ 
ಕರ್ನಾಟಕ ರಾಜ್ಯ ಪೊಲೀಸ್ಆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ದೇಹದಾರ್ಢ್ಯತೆ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಫೆಬ್ರವರಿ 10, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 03, 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ Click Here 
ನೋಟಿಫಿಕೇಶನ್ Click Here 
ಅರ್ಜಿ ಲಿಂಕ್ Click Here 

 

JOBS BY QUALIFICATION

close button