ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. : KSP Recruitment 2022

 

KSP Recruitment 2022 Apply Online for 70 Special Reserve Sub Inspector (KRSI & IRB) 

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 70 ವಿಶೇಷ ಮೀಸಲು ಸಬ್-ಇನ್ಸ್‍ಪೆಕ್ಟರ್ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಒಟ್ಟು ಹುದ್ದೆಗಳು: 70
ಉದ್ಯೋಗ ಸ್ಥಳ: ಕರ್ನಾಟಕ

ವಿದ್ಯಾರ್ಹತೆ:
ಅಭ್ಯರ್ಥಿಗಳು ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:
ಕನಿಷ್ಠ 21 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ ಈ ಕೆಳಗಿನ ವಯೋಮಿತಿಯನ್ನು ಮೀರಿರಬಾರದು,
ಸಾಮಾನ್ಯವರ್ಗ 26 ವರ್ಷ
ಹಿಂದುಳಿದ ವರ್ಗ /ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 28 ವರ್ಷಗಳ ಗರಿಷ್ಠ ವಯೋಮಿತಿಗಳನ್ನು ಮೀರಿರಬಾರದು.

 

 

ವೇತನಶ್ರೇಣಿ:
ವೇತನ ಶ್ರೇಣಿ : 37900-950-39800-1100-46400-1250-53900-1450-65600-1650-70850

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ 500 ಹಾಗೂ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ 250 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ : 20 ಡಿಸೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18 ಜನವರಿ 2022
ಶುಲ್ಕ ಪಾವತಿಗೆ ಕೊನೆಯ ದಿನಾಂಕ : 20 ಜನವರಿ 2022

Website
Download Notification PDF

 

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

close button