ವಿದ್ಯಾರ್ಥಿಗಳಿಗೆ 20 ಸಾವಿರ ರೂ. ಪ್ರೋತ್ಸಾಹ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ
Labour Card Scholarship 2023 Apply Online – ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ಈ ಯೋಜನೆಗೆ ಅರ್ಹರಾದ ಅಭ್ಯರ್ಥಿಗಳು ಯಾರು ಹಾಗೂ ಅರ್ಜಿ ಸಲ್ಲಿಸುವ ವಿಧಾನ ಮತ್ತು ಎಷ್ಟು ಪ್ರೋತ್ಸಾಹ ಧನ ಸಿಗಲಿದೆ ಎಂಬ ಇತ್ಯಾದಿ ಮಾಹಿತಿಯನ್ನು ಈ ಲೇಖನದಲ್ಲಿ ನಾನು ತಿಳಿಸಿದ್ದೇವೆ.
ಈ ಯೋಜನೆಯ ಹೆಸರು: ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ
ಪ್ರೋತ್ಸಾಹ ಧನ : 6,000 ದಿಂದ 20 ಸಾವಿರದವರೆಗೆ ಕೊಡಲಾಗುತ್ತದೆ
ಈ ಯೋಜನೆಗೆ ಅರ್ಹರಾದ ಅಭ್ಯರ್ಥಿಗಳು ಪ್ರೌಢಶಾಲೆ ಅಥವಾ ಪಿಯುಸಿ ಅಥವಾ ಡಿಪ್ಲೋಮಾ ಐಟಿಐ ಪದವಿ ಹಾಗೂ ಸ್ನಾತಕೋತ್ತರ ಪದವಿ ಎಂಜಿನಿಯರಿಂಗ್ ಅಥವಾ ವೈದ್ಯಕೀಯ ವಿದ್ಯಾಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ಇಂದ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ (ಪ್ರೌಢಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ ಅಥವಾ ಇಂಜಿನಿಯರಿಂಗ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವವರಿಗೆ)
ಕಾರ್ಮಿಕರ ತಿಂಗಳ ವೇತನ ರೂಪಾಯಿ 35,000 ಮೀರಿರಬಾರದು ಹಾಗೂ ಒಂದು ಕುಟುಂಬದಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಈ ಅನುಕೂಲ ನೀಡಲಾಗುವುದು ಎಂದು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ಪತ್ರಿಕ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶೈಕ್ಷಣಿಕ ಪ್ರೋತ್ಸಾಹ ಧನ ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಅಧಿಕೃತ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
- ಅರ್ಹತೆಗಳು
ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು. - ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಯು ಶೇಕಡ 50ರಷ್ಟು ಅಂಕ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಯು 45ರಷ್ಟು ಅಂಕ ಪಡೆದು ಉತ್ತೀರ್ಣರಾಗಿರಬೇಕು.
- ಶೈಕ್ಷಣಿಕ ಪ್ರೋತ್ಸಾಹ ಧನದ ಮೊತ್ತ
ಮೇಲೆ ತಿಳಿಸಿದ ತರಗತಿಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಮೊತ್ತ ನೀಡಲಾಗುವುದು. - ಪ್ರೌಢಶಾಲೆಯ 8 ರಿಂದ 10ನೇ ತರಗತಿವರೆಗಿನ ಅಭ್ಯರ್ಥಿಗಳು 6,000 ಪ್ರೋತ್ಸಾಹ ಧನ ಪಡೆಯಬಹುದು
ಪಿಯುಸಿ ಡಿಪ್ಲೋಮಾ ಐಟಿಐ ಟಿಸಿಎಚ್ ಹಾಗೂ ಇತ್ಯಾದಿ ವಿದ್ಯಾರ್ಥಿಗಳಿಗೆ ರೂ 8,000 ಪ್ರೋತ್ಸಾಹ ಧನ ನೀಡಲಾಗುವುದು - ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ರೂ 10,000 ಮೊತ್ತ ಪ್ರೋತ್ಸಾಹ ಧನ ನೀಡಲಾಗುವುದು
- ಸ್ನಾತಕೋತ್ತರ ಪದವಿ ಮುಗಿಸಿರುವ ವಿದ್ಯಾರ್ಥಿಗಳಿಗೆ ರೂ 12,000 ಪ್ರೋತ್ಸಾಹ ಧನ ನೀಡಲಾಗುವುದು
ಇಂಜಿನಿಯರಿಂಗ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ರೂ 20,000 ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48, 1ನೇ & 2ನೇ ಮಹಡಿ, ಮತ್ತೀಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು-560022 ಇಲ್ಲಿ ಖುದ್ದಾಗಿ ಅಥವಾ ದೂರವಾಣಿ 080-23475188, 8277291175, 8277120505. 9141585402, 9141602562 ಮೂಲಕ ಸಂಪರ್ಕಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಜನವರಿ 2024
ಅರ್ಜಿ ಸಲ್ಲಿಸುವ ಲಿಂಕ್ – ಇಲ್ಲಿ ಕ್ಲಿಕ್ ಮಾಡಿ |