ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

LIC ನೇಮಕಾತಿ ಅಧಿಸೂಚನೆ 2025 – 250 ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ

LIC ಹೌಸಿಂಗ್ ಫೈನಾನ್ಸ್ ನಿಯಮಿತ ನೇಮಕಾತಿ 2025 – 250 ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

LIC HFL Recruitment 2025 – LIC ಹೌಸಿಂಗ್ ಫೈನಾನ್ಸ್ ನಿಯಮಿತ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ  ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಭಾರತದ ಪ್ರಮುಖ ಗೃಹ ಹಣ ಸಹಾಯ ಸಂಸ್ಥೆಗಳಲ್ಲಿ ಒಂದಾದ LIC ಹೌಸಿಂಗ್ ಫೈನಾನ್ಸ್ ನಿಯಮಿತ (LIC HFL) ತನ್ನ 2025 ನೇ ಸಾಲಿನ ನೇಮಕಾತಿ ಅಧಿಸೂಚನೆ ಅನ್ನು ಪ್ರಕಟಿಸಿದ್ದು, 250 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಇದು ಭಾರತಾದ್ಯಾಂತ ಅಭ್ಯರ್ಥಿಗಳಿಗೆ ದೊರೆಯುವ ಸುಪ್ರತಿಷ್ಠಿತ ಅವಕಾಶವಾಗಿದ್ದು, ನಾನಾ ರಾಜ್ಯಗಳಿಂದ ಆಸಕ್ತ ಅಭ್ಯರ್ಥಿಗಳು ಇದರ ಲಾಭ ಪಡೆಯಬಹುದು.

ಈ ನೇಮಕಾತಿಯು ಗ್ರಾಜುಯೇಷನ್ ಪೂರೈಸಿದ ಯುವಕರಿಗೆ ಉತ್ತಮ ಕಾರ್ಯ ಅನುಭವದ ಅವಕಾಶವನ್ನು ಒದಗಿಸುತ್ತದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 28-ಜೂನ್-2025 ಆಗಿದ್ದು, ಅರ್ಹ ಅಭ್ಯರ್ಥಿಗಳು ಸಮಯಮಿತಿಯೊಳಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಉದ್ಯೋಗ ವಿವರಗಳು
ಇಲಾಖೆ ಹೆಸರು LIC ಹೌಸಿಂಗ್ ಫೈನಾನ್ಸ್ ನಿಯಮಿತ (LIC HFL)
ಹುದ್ದೆಗಳ ಹೆಸರು ಅಪ್ರೆಂಟಿಸ್
ಒಟ್ಟು ಹುದ್ದೆಗಳು 250 (ಕರ್ನಾಟಕ 36)
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) 
ಉದ್ಯೋಗ ಸ್ಥಳ –ಭಾರತಾದ್ಯಂತ 

ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Graduation) ಪೂರೈಸಿರಬೇಕು. ಯಾವುದೇ ಶಾಖೆಯ ಪದವಿದಾರರು ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಕನಿಷ್ಠ ವಯಸ್ಸು: 20 ವರ್ಷ (01-ಜೂನ್-2025ಕ್ಕೆ)
ಗರಿಷ್ಠ ವಯಸ್ಸು: 25 ವರ್ಷ

ವಯೋಮಿತಿಗೆ ಸಡಿಲಿಕೆ:
ವಿಭಿನ್ನ ವರ್ಗದ ಅಭ್ಯರ್ಥಿಗಳಿಗೆ LIC HFL ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಕಲ್ಪಿಸಲಾಗುತ್ತದೆ.

ಅರ್ಜಿ ಶುಲ್ಕ:
ಅಂಗವಿಕಲ ಅಭ್ಯರ್ಥಿಗಳಿಗೆ: ₹472/-
ಎಸ್ಸಿ/ಎಸ್ಟಿ/ಮಹಿಳಾ ಅಭ್ಯರ್ಥಿಗಳಿಗೆ: ₹708/-
ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ: ₹944/-
ಪಾವತಿ ವಿಧಾನ: ಆನ್ಲೈನ್ ಮೂಲಕ ಮಾತ್ರ

ಆಯ್ಕೆ ವಿಧಾನ:
ಪ್ರವೇಶ ಪರೀಕ್ಷೆ
ದಾಖಲೆಗಳ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಅರ್ಜಿ ಸಲ್ಲಿಕೆ ಕ್ರಮ:
ಅಧಿಕೃತ ವೆಬ್‌ಸೈಟ್‌ www.lichousing.com ಗೆ ಭೇಟಿ ನೀಡಿ.
ಅಧಿಸೂಚನೆಯನ್ನು ಓದಿ, ಅರ್ಹತೆ ಹೊಂದಿದರೆ ಮುಂದುವರಿಯಿರಿ.
ಅಗತ್ಯವಿರುವ ಡಾಕ್ಯುಮೆಂಟ್‌ಗಳು (ಶೈಕ್ಷಣಿಕ ದಾಖಲೆಗಳು, ಗುರುತಿನ ದಾಖಲಾತಿ, ಫೋಟೋ, ಪಾಸ್ಪೋರ್ಟ್ ಗಾತ್ರದ ಫೋಟೋ ಇತ್ಯಾದಿ) ಸಿದ್ಧಪಡಿಸಿ.
ಆನ್ಲೈನ್ ಅರ್ಜಿ ಫಾರ್ಮ್ ಭರ್ತಿ ಮಾಡಿ.
ಅರ್ಜಿ ಶುಲ್ಕವನ್ನು ಪಾವತಿಸಿ.
ಫಾರ್ಮ್ ಸಲ್ಲಿಸಿ ಮತ್ತು ಅರ್ಜಿ ಸಂಖ್ಯೆ ಅಥವಾ ರಶೀದಿ ಸಂಖ್ಯೆ ಕಾಯ್ದಿರಿಸಿ.

ಪ್ರಮುಖ ದಿನಾಂಕಗಳು:
ಆನ್ಲೈನ್ ಅರ್ಜಿ ಪ್ರಾರಂಭ ದಿನಾಂಕ: 13-ಜೂನ್-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-ಜೂನ್-2025
ಪರೀಕ್ಷಾ ಶುಲ್ಕ ಪಾವತಿ ಕೊನೆಯ ದಿನಾಂಕ (BFSI ಗೆ): 30-ಜೂನ್-2025
ಪ್ರವೇಶ ಪರೀಕ್ಷೆ ದಿನಾಂಕ: 03-ಜುಲೈ-2025
ದಾಖಲೆ ಪರಿಶೀಲನೆ ಹಾಗೂ ಸಂದರ್ಶನ ದಿನಾಂಕ: 08 ಮತ್ತು 09 ಜುಲೈ-2025
ಆಫರ್ ಲೆಟರ್ ನೀಡುವ ದಿನಾಂಕ: 10 ಮತ್ತು 11 ಜುಲೈ-2025
ಅಪ್ರೀಂಟಿಸ್ ತರಬೇತಿಗೆ ಹಾಜರಾಗುವ ದಿನಾಂಕ: 14-ಜುಲೈ-2025

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 13-ಜೂನ್-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28-ಜೂನ್-2025

ಪ್ರಮುಖ ಲಿಂಕುಗಳು
ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
ನಮ್ಮ ಯೂಟ್ಯೂಬ್ ಚಾನೆಲ್ ನೋಡಿ: ಇಲ್ಲಿ ಕ್ಲಿಕ್ ಮಾಡಿ

LIC ನೇಮಕಾತಿ ಅಧಿಸೂಚನೆ 2025 – 250 ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ

close button