LIC ಇಂದ ಮತ್ತೊಂದು ಹೊಸ ನೇಮಕಾತಿ 2021 : ಭಾರತೀಯ ಜೀವ ವಿಮಾ ನಿಗಮದಲ್ಲಿ ಖಾಲಿ ಹುದ್ದೆಗಳು

 

ಭಾರತೀಯ ಜೀವ ವಿಮಾ ನಿಗಮದಲ್ಲಿ 3 ಕಂಪನಿ ಕಾರ್ಯದರ್ಶಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 9,2021 ರಿಂದ ಡಿಸೆಂಬರ್ 23,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ವಿದ್ಯಾರ್ಹತೆ:
ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:
ಕನಿಷ್ಟ 30 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

 

ವೇತನದ ವಿವರ:
ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಸುವುದು ಹೇಗೆ:
ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.icsi.edu/home/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಆಗಸ್ಟ್ ಡಿಸೆಂಬರ್ 9,2021 ರಿಂದ ಡಿಸೆಂಬರ್ 23,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Website
Notification PDF

 

LIC Recruitment 2021 Apply Online For 03 Company Secretary Posts

 

error: Content is protected !!