ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ : Zilla Panchayat Recruitment 2022 Apply Online

ಮಂಡ್ಯ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ 2022

Mandya Zilla Panchayat Recruitment 2022: ಮಂಡ್ಯ ಜಿಲ್ಲೆಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು:ಜಿಲ್ಲಾ ಪಂಚಾಯತ್ ಮಂಡ್ಯ 
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 13
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ ಮೂಲಕ 
ಉದ್ಯೋಗ ಸ್ಥಳ ಮಂಡ್ಯ 

 

ಹುದ್ದೆಗಳ ವಿವರ
ತಾಂತ್ರಿಕ ಸಹಾಯಕರು (ಅರಣ್ಯ) 03
ಶೈಕ್ಷಣಿಕ ವಿದ್ಯಾರ್ಹತೆ – ಬಿ.ಎಸ್ಸಿ (ಅರಣ್ಯ) ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯೋಮಿತಿ: ಕನಿಷ್ಠ 21 ವರ್ಷಗಳು  ಗರಿಷ್ಠ 40 ವರ್ಷಗಳು

ತಾಂತ್ರಿಕ ಸಹಾಯಕರು (ತೋಟಗಾರಿಕೆ) 01
ಶೈಕ್ಷಣಿಕ ವಿದ್ಯಾರ್ಹತೆ – ಬಿ.ಎಸ್ಸಿ (ತೋಟಗಾರಿಕೆ) ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯೋಮಿತಿ: ಕನಿಷ್ಠ 21 ವರ್ಷಗಳು  ಗರಿಷ್ಠ 40 ವರ್ಷಗಳು 


ತಾಲ್ಲೂಕು ಐ.ಇ.ಸಿ. ಸಂಯೋಜಕರು 02
ಶೈಕ್ಷಣಿಕ ವಿದ್ಯಾರ್ಹತೆ – ಮಾಸ್ ಕಮ್ಯುನಿಕೇಷನ್ ನಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯೋಮಿತಿ: ಕನಿಷ್ಠ 21 ವರ್ಷಗಳು  ಗರಿಷ್ಠ 45 ವರ್ಷಗಳು 

ಆಡಳಿತ ಸಹಾಯಕರು 07
ಶೈಕ್ಷಣಿಕ ವಿದ್ಯಾರ್ಹತೆ – ಬಿ.ಕಾಂ ಪದವಿ ಜೊತೆಗೆ ಕನ್ನಡ & ಇಂಗ್ಲಿಷ್ ಟೈಪಿಂಗ್ ಪರಿಣಿತಿ ಹೊಂದಿರಬೇಕು ಹಾಗೂ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯೋಮಿತಿ: ಕನಿಷ್ಠ 21 ವರ್ಷಗಳು  ಗರಿಷ್ಠ 35 ವರ್ಷಗಳು 

ವೇತನಶ್ರೇಣಿ: 
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 24,000 ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ 
ಹೊರಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಆಡಳಿತ ಸಹಾಯಕ ಹುದ್ದೆಗೆ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಮತ್ತು ಕನ್ನಡ ಹಾಗೂ ಇಂಗ್ಲೀಷ್ ಟೈಪಿಂಗ್ ಬಗ್ಗೆ ಪ್ರಾಯೋಗಿಕ ಪರೀಕ್ಷೆ ನಡೆಸಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 03-02-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 17-02-2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ Click Here 
ನೋಟಿಫಿಕೇಶನ್ Click Here 
ಅರ್ಜಿ ಲಿಂಕ್ Click Here 

 

close button