ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಮಂಗಳೂರು ವಿದ್ಯುತ್ ಸರಬರಾಜು ಘಟಕದಿಂದ ನೇಮಕಾತಿ ಅಧಿಸೂಚನೆ 2021

ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್‌ (MESCOM) ನ ಹೆಚ್‌ಆರ್‌ಡಿ ಕೇಂದ್ರವು ಗ್ರಾಜುಯೇಟ್‌ ಅಪ್ರೆಂಟಿಸ್, ಟೆಕ್ನೀಷಿಯನ್‌ ಡಿಪ್ಲೊಮ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ:
* ಗ್ರಾಜುಯೇಟ್‌ ಅಪ್ರೆಂಟಿಸ್ (ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್‌ ಇಂಜಿನಿಯರಿಂಗ್) 125 ಹುದ್ದೆಗಳು
*ಟೆಕ್ನೀಷಿಯನ್ ಡಿಪ್ಲೊಮ ಅಪ್ರೆಂಟಿಸ್ (ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್‌ ಇಂಜಿನಿಯರಿಂಗ್) 75 ಹುದ್ದೆಗಳು

ವಿದ್ಯಾರ್ಹತೆ: ಹುದ್ದೆಗಳಿಗೆ ಅನುಗುಣವಾಗಿ ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್‌ ವಿಭಾಗದಲ್ಲಿ ಇಂಜಿನಿಯರಿಂಗ್ / ಡಿಪ್ಲೊಮ ಪಾಸ್‌ ಮಾಡಿರಬೇಕು.

ವಯೋಮಿತಿ: ಕೇಂದ್ರೀಯ ಅಪ್ರೆಂಟಿಸ್‌ ನಿಯಮಗಳ ಪ್ರಕಾರ ಅನ್ವಯವಾಗಲಿದೆ.

ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಮಾಡಿ, ಪರ್ಸನಾಲಿಟಿ ಟೆಸ್ಟ್‌ ಮತ್ತು ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಆನ್‌ಲೈನ್‌ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ 19-08-2021
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ(NATS ಪೋರ್ಟಲ್‌ನಲ್ಲಿ) 05-09-2021
ಮೆಸ್ಕಾಂ ವೆಬ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 09-09-2021
ಶಾರ್ಟ್‌ ಲಿಸ್ಟ್‌ ಬಿಡುಗಡೆ ದಿನಾಂಕ 14-09-2021
ಮೂಲಕ ದಾಖಲೆಗಳ ಪರಿಶೀಲನೆ ದಿನಾಂಕ 21-09-2021 ಮತ್ತು 23-09-2021

Website 
Notification 
Apply Link 

 

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

Scroll to Top