ಹೆಸ್ಕಾಂ ನೇಮಕಾತಿ ಅಧಿಸೂಚನೆ 2021 / Hescom Recruitment 2021 IA

ಹೆಸ್ಕಾಂ ಅಧೀನದಲ್ಲಿನ ವಿಜಯಪುರ ಜಿಲ್ಲೆ ವ್ಯಾಪ್ತಿಯ 26 ಗ್ರಾಮ ಪಂಚಾಯಿತಿಗಳಲ್ಲಿ ಮೈಕ್ರೋ ಫೀಡರ್ ಫ್ರಾಂಚೈಸಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳನ್ನು ಪ್ರೋತ್ಸಾಹ ಧನ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅಫ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಗತ್ಯ ಮಾಹಿತಿಗಳನ್ನು ಈ ಕೆಳಗಿನಂತೆ ನೀಡಲಾಗಿದೆ.

ಹುದ್ದೆಗಳ ಹೆಸರು ಮೈಕ್ರೋ ಫೀಡರ್ ಫ್ರಾಂಚೈಸಿ
ಹುದ್ದೆಗಳ ಸಂಖ್ಯೆ 28

ಅರ್ಹತೆಗಳು
ಮೈಕ್ರೋ ಫೀಡರ್ ಫ್ರಾಂಚೈಸಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಸಂಬಂಧಿಸಿದ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಾಗಿರಬೇಕು. ವಾಸ ಸ್ಥಳದ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಗ್ರಾಮ ಪಂಚಾಯಿತಿಯ ಅಧಿಕೃತ ಅಧಿಕಾರಿಯಿಂದ ಪಡೆದಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಾಸ್‌ ಮಾಡಿರಬೇಕು.

ವಯೋಮಿತಿ: ದಿನಾಂಕ 16-08-2021 ಕ್ಕೆ ಕನಿಷ್ಠ 18 ವರ್ಷ, ಗರಿಷ್ಠ 40 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ: ಹೆಸ್ಕಾಂ ನಿಗದಿಪಡಿಸಿದ ಮಾಸಿಕ ಮೂಲ ಗುರಿಯನ್ನು ಸಾಧಿಸಿದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.12,000 ಕನಿಷ್ಠ ಖಚಿತ ಪ್ರೋತ್ಸಾಹ ಧನ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?
ನೋಟಿಫಿಕೇಶನ್‌ನಲ್ಲಿ ನೀಡಲಾದ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಅಧೀಕ್ಷಕ ಇಂಜಿನಿಯರ್ (ವಿ), ಕಾರ್ಯ ಮತ್ತು ಪಾಲನಾ ವೃತ್ತ ಕಛೇರಿ, ಹುವಿಸಕಂನಿ, ಬಿಡಿಎ ಕಛೇರಿ ಹತ್ತಿರ, ಬ.ಬಾಗೇವಾಡಿ ರಸ್ತೆ, ವಿಜಯಪುರ- 586109.

ಅರ್ಜಿಯೊಂದಿಗೆ ಡಿಡಿ ಮೊತ್ತ ರೂ.295 ಅನ್ನು “Superintending Engineer (Ele), o & m Circle, HESCOM, Vijayapura ಹೆಸರಿನಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಪಾವತಿಸಿ, ಈ ರಶೀದಿಯನ್ನು ನೋಟಿಫಿಕೇಶನ್‌ ಜತೆಗೆ ಲಗತ್ತಿಸಬೇಕು.

ಆಯ್ಕೆ ಪ್ರಕ್ರಿಯೆ
ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಪಡೆದಿರುವ ಗರಿಷ್ಠ ಅಂಕಗಳನ್ವಯ ಮೆರಿಟ್ ಆಧಾರದ ಮೇಲೆ ಲಿಸ್ಟ್‌ ಮಾಡಲಾಗುತ್ತದೆ. ನಂತರ 1:2 ಅನುಪಾತದಲ್ಲಿ ಹುದ್ದೆಗಳಿಗೆ ಶಾರ್ಟ್‌ ಲಿಸ್ಟ್‌ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಆನ್‌ಲೈನ್‌ ಮೂಲಕ ಅರ್ಜಿ ಡೌನ್‌ಲೋಡ್‌ ಮಾಡಲು ವೆಬ್‌ ವಿಳಾಸ :hescom.karnataka.gov.in

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 16-08-2021 ರ ಸಂಜೆ 04-30 ಗಂಟೆಯೊಳಗೆ.
ದಾಖಲೆಗಳ ಪರಿಶೀಲನೆ ದಿನಾಂಕ : 19-08-2021

Website
Notification – Application Form

error: Content is protected !!