ಹೊಸ ನೇಮಕಾತಿ ಅಧಿಸೂಚನೆ 2023
Mysore District Court Recruitment 2023 : ಮೈಸೂರು ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಮೈಸೂರು ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಮೈಸೂರು ಜಿಲ್ಲಾ ನ್ಯಾಯಾಲಯ ಘಟಕ – Mysore District Court |
ಹುದ್ದೆಗಳ ಹೆಸರು: | ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಸೇವಕರು |
ಒಟ್ಟು ಹುದ್ದೆಗಳು | ಒಟ್ಟು 59 ಹುದ್ದೆಗಳ ಭರ್ತಿ |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಶೀಘ್ರಲಿಪಿಗಾರರು ಗ್ರೇಡ್ 3 11 |
ಬೆರಳಚ್ಚುಗಾರರು 03 |
ಸೇವಕರು 45 |
ವಿದ್ಯಾರ್ಹತೆ:
ಶೀಘ್ರಲಿಪಿಗಾರರು ಗ್ರೇಡ್ 3 – 1. ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಮೂರು ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
2. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಹಿರಿಯ ಶ್ರೇಣಿ ಬೆರಳಚ್ಚು (Typewriting Senior) ಹಾಗೂ ಕನ್ನಡ ಮತ್ತು ಆಂಗ್ಲ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ (Shorthand Senior) ಪರೀಕ್ಷೆಯಲ್ಲಿ ಅಥವಾ ಡಿಪ್ಲೊಮೊ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.
ಬೆರಳಚ್ಚುಗಾರರು – 1. ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಮೂರು ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
2. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಹಿರಿಯ ಶ್ರೇಣಿ ಬೆರಳಚ್ಚು (Typewriting Senior) ಅಥವಾ ಡಿಪ್ಲೊಮೊ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.
ಸೇವಕರು – 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿ ಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ವೇತನಶ್ರೇಣಿ:
ಶೀಘ್ರಲಿಪಿಗಾರರು ಗ್ರೇಡ್ 3 11 | ರೂ.27650/- ರೂ.52650/- |
ಬೆರಳಚ್ಚುಗಾರರು 03 | ರೂ.21400/ – ರೂ.42000/- |
ಸೇವಕರು 45 | ರೂ.17000/- ರೂ.28950/- |
ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳು – ರೂ. 200
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 100
ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ
( ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.)
ಆಯ್ಕೆ ವಿಧಾನ:
ಶೀಘ್ರಲಿಪಿಗಾರ, ಬೆರಳಚ್ಚುಗಾರ – ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಉಕ್ತಲೇಖನವನ್ನು ಅನುಲಿಪಿ ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಶೇಕಡಾವಾರು ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಸೇವಕರು – ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಜೂನ್ 05, 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಜುಲೈ 04, 2023 |
ಶುಲ್ಕ ಪಾವತಿಸಲು ಕೊನೆಯ ದಿನಾಂಕ | ಜುಲೈ 08, 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ ಶೀಘ್ರಲಿಪಿಗಾರರು | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ ಬೆರಳಚ್ಚುಗಾರರು | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ ಸೇವಕರು | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |