ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ ನೇಮಕಾತಿ 2022

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ ನೇಮಕಾತಿ ಅಧಿಸೂಚನೆ 2022

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ ಇದೀಗ ಗ್ರೇಡ್‌ ಎ ಅಸಿಸ್ಟಂಟ್‌ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌
ಹುದ್ದೆಗಳ ಹೆಸರು:ಗ್ರೇಡ್‌ ಎ ಅಸಿಸ್ಟಂಟ್ ಮ್ಯಾನೇಜರ್
ಒಟ್ಟು ಹುದ್ದೆಗಳು 170
ಅರ್ಜಿ ಸಲ್ಲಿಸುವ ಬಗೆ ಜುಲೈ 18 ರಿಂದ ಆನ್ಲೈನ್ ಮೂಲಕ 
ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ 
ಅಸಿಸ್ಟಂಟ್ ಮ್ಯಾನೇಜರ್ ಇನ್‌ ಗ್ರೇಡ್‌ ಎ (ಆರ್ಡಿಬಿಎಸ್) :161
ಅಸಿಸ್ಟಂಟ್ ಮ್ಯಾನೇಜರ್ ಇನ್‌ ಗ್ರೇಡ್‌ ಎ (ರಾಜ್‌ಭಾಷಾ) :07
ಅಸಿಸ್ಟಂಟ್ ಮ್ಯಾನೇಜರ್ ಇನ್‌ ಗ್ರೇಡ್‌ ಎ (ಪ್ರೋಟೋಕಾಲ್‌ ಮತ್ತು ಸೆಕ್ಯೂರಿಟಿ ಸರ್ವೀಸ್) :02

ವಿದ್ಯಾರ್ಹತೆ:
ನಬಾರ್ಡ್ ಗ್ರೇಡ್‌ ಎ ಅಸಿಸ್ಟಂಟ್‌ ಹುದ್ದೆಗಳಿಗೆ ಯಾವುದೇ ವಿಷಯದಲ್ಲಿ ಪದವಿಯನ್ನು ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು. ಕನಿಷ್ಠ ಶೇಕಡ 60 ಅಂಕಗಳೊಂದಿಗೆ ಡಿಗ್ರಿ ಪಾಸ್‌ ಮಾಡಿರಬೇಕು. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಾಗಿದ್ದಲ್ಲಿ ಕನಿಷ್ಠ ಶೇಕಡ.55 ಅಂಕಗಳೊಂದಿಗೆ ಪಾಸ್‌ ಮಾಡಿರಬೇಕು.

ವೇತನಶ್ರೇಣಿ:
ನಬಾರ್ಡ್‌ ಗ್ರೇಡ್‌ ಎ ಅಸಿಸ್ಟಂಟ್‌ ಹುದ್ದೆಗಳಿಗೆ ವೇತನ ಶ್ರೇಣಿ ರೂ.28,150-55,600 ವರೆಗೆ ಇರುತ್ತದೆ.

ಆಯ್ಕೆ ವಿಧಾನ:
ನಬಾರ್ಡ್ ನೇಮಕಾತಿ ಅಧಿಸೂಚನೆಯ ಪ್ರಕಾರ  ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ / ಸಂದರ್ಶನ / ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ಆಧಾರ್ ಕಾರ್ಡ್
ಡಿಗ್ರಿ ಸರ್ಟಿಫಿಕೇಟ್‌
ಜನ್ಮ ದಿನಾಂಕ ಪ್ರಮಾಣ ಪತ್ರ
ಕಾರ್ಯಾನುಭವ ಇದ್ದಲ್ಲಿ ಪ್ರಮಾಣ ಪತ್ರಗಳು
ಇತರೆ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 18-07-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07-08-2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
close button