NTPC ನೇಮಕಾತಿ 2022 | NTPC Recruitment 2022

ರಾಷ್ಟ್ರೀಯ ಉಷ್ಣಶಕ್ತಿ ನಿಗಮ ನಿಯಮಿತ ನೇಮಕಾತಿ 2022

NTPC Recruitment 2022: ರಾಷ್ಟ್ರೀಯ ಉಷ್ಣಶಕ್ತಿ ನಿಗಮ ನಿಯಮಿತದಲ್ಲಿ ಖಾಲಿ  ಇರುವ 55 ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

 

ಇಲಾಖೆ ಹೆಸರು: ರಾಷ್ಟ್ರೀಯ ಉಷ್ಣಶಕ್ತಿ ನಿಗಮ ನಿಯಮಿತ
ಹುದ್ದೆಗಳ ಹೆಸರು: ಎಕ್ಸಿಕ್ಯೂಟಿವ್
ಒಟ್ಟು ಹುದ್ದೆಗಳು  55
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ವಿವರ 
ಕಂಬೈನ್ಡ್ ಸೈಕಲ್ ಪವರ್ ಪ್ಲಾಂಟ್ ಓ ಅಂಡ್ ಎಂ – 50 ಹುದ್ದೆಗಳು
ಅಪರೇಷನ್ಸ್ ಪವರ್ ಟ್ರೇಡಿಂಗ್ – 04 ಹುದ್ದೆಗಳು
ಬಿಡಿ ಪವರ್ ಟ್ರೇಡಿಂಗ್ – 01 ಹುದ್ದೆಗಳು

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿಯನ್ನು ಪೂರೈಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.
ವೃತ್ತಿಯಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

 

 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಸಡಿಲಿಕೆ
ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು

ಎಸ್ಸಿ/ಎಸ್ಟಿ ಅಭ್ಯರ್ಥಿಗಳು: 5 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳು: 10 ವರ್ಷಗಳು

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.90,000/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ. ಜೊತೆಗೆ ಮನೆಬಾಡಿಗೆ ಭತ್ಯೆ, ವೈದ್ಯಕೀಯ ಸೌಲಭ್ಯ, ಹಾಗೂ ಇತರೆ ಭತ್ಯೆಯನ್ನು ನೀಡಲಿದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ರೂ. 300/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* ಎಸ್ಸಿ ಎಸ್ಟಿ, ಅಂಗವಿಕಲ, ಮಾಜಿ ಸೈನಿಕ, ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಿಸಲಾಗಿದೆ.

ಆಯ್ಕೆ ವಿಧಾನ 
ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  26 ಮಾರ್ಚ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  8 ಎಪ್ರಿಲ್ 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

 

error: Content is protected !!