Kalaburagi eCourt Recruitment 2020 – Apply Online
ಕಲಬುರಗಿ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು 02 ಆದೇಶ ಜಾರಿಕಾರರ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ:
ಹುದ್ದೆ ಹೆಸರು: ಆದೇಶ ಜಾರಿಕಾರರು (Process Server)
ಒಟ್ಟು ಹುದ್ದೆಗಳು: 02
ಉದ್ಯೋಗ ಸ್ಥಳ: ಕಲಬುರಗಿ
ವಿದ್ಯಾರ್ಹತೆ
ಹತ್ತನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ, ಚಾಲನಾ ಪರವಾನಿಗೆ (Driving License) ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು
ಅರ್ಜಿ ಶುಲ್ಕ
ಹಿಂದುಳಿದ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ- 200/- ರೂ ಅರ್ಜಿ ಶುಲ್ಕವನ್ನ ಪಾವತಿಸಬೇಕು.
ಪ.ಜಾತಿ,ಪ.ಪಂಗಡದ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ವಯೋಮಿತಿ
ಕನಿಷ್ಠ- 18 ವರ್ಷಗಳನ್ನು ಮತ್ತು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ- 35 ವರ್ಷಗಳು
2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು
ಎಸ್ಸಿ ಎಸ್ಟಿ ಪ್ರವರ್ಗ -1 ರ ಅಭ್ಯರ್ಥಿಗಳಿಗೆ 40 ವರ್ಷಗಳು
ವೇತನ ಶ್ರೇಣಿ: ರೂ 19,950 /- ದಿಂದ ರೂ 37,900 /- ರೂ.ಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ವಿಧಾನ
ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ
ಮೇಲೆ 1 ಹುದ್ದೆಗೆ 25 ಅಭ್ಯರ್ಥಿಗಳಂತೆ (1:25 ರ ಅನುಪಾತದಲ್ಲಿ) ಅತಿ ಹೆಚ್ಚು ಅಂಕ
ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ
ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ
ಮಾಡಲಾಗುವುದು.
ಟಿಪ್ಪಣಿ: ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ.
ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 31-12-2020
Website – ವೆಬ್ಸೈಟ್ |
Notification – ನೋಟಿಫಿಕೇಶನ್ |
Apply Online – ಅರ್ಜಿ ಫಾರ್ಮ್ |
ಕೇಶನ್
Apply Online – ಅರ್ಜಿ ಫಾರ್ಮ್