ನಾಳೆ ಬೆಳಿಗ್ಗೆ 11.30ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ?

Telegram Group

ಬೆಂಗಳೂರು : ಕೊರೋನಾ ಸಂಕಷ್ಟದ ನಡುವೆಯೂ ಬಾಕಿ ಉಳಿದಿದ್ದಂತ ಇಂಗ್ಲಿಷ್ ಪತ್ರಿಕೆಯ ಪರೀಕ್ಷೆ ನಡೆದ ನಂತ್ರ, ದ್ವಿತೀಯ ಪಿಯುಸಿಯ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದೆ. ನಾಳೆ ಬೆಳಿಗ್ಗೆ 11.30ಕ್ಕೆ ವಿದ್ಯಾರ್ಥಿಗಳ ಮೊಬೈಲ್ ಗೆ ಫಲಿತಾಂಶ ತಲುಪಲಿದೆ. ಈ ಮೂಲಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾಹಿತಿ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಇತ್ತೀಚೆಗೆ ಮುಕ್ತಾಯಗೊಂಡಿದ್ದಂತ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆದಂತ ಪ್ರತಿ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಫಲಿತಾಂಶದ ವಿವರ ಬರಲಿದೆ ಎಂಬುದಾಗಿ ತಿಳಿಸಿದ್ದಾರೆ.



Telegram Group
error: Content is protected !!