ಆರ್‌ಬಿಐ ನಲ್ಲಿ ಗ್ರೂಪ್ ಬಿ ಹುದ್ದೆಗಳಿಗೆ ಅರ್ಜಿ ಅಹ್ವಾನ – RBI Recruitment 2022

ಆರ್‌ಬಿಐ ಗ್ರೇಡ್ ಬಿ ನೇಮಕಾತಿ 2022

ಭಾರತೀಯ ರಿಸರ್ವ್ ಬ್ಯಾಂಕ್ ವಿವಿಧ ಗ್ರೂಪ್ ಬಿ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು: ಭಾರತೀಯ ರಿಸರ್ವ್ ಬ್ಯಾಂಕ್
ಹುದ್ದೆಗಳ ಹೆಸರು: ಗ್ರೂಪ್ ಬಿ ಮತ್ತು ಅಸಿಸ್ಟೆಂಟ್ ಮ್ಯಾನೇಜರ್
ಒಟ್ಟು ಹುದ್ದೆಗಳು  290
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ಭಾರತೀಯ ರಿಸರ್ವ್ ಬ್ಯಾಂಕ್ ವಿವಿಧ ಗ್ರೂಪ್ ಬಿ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ rbi.org.in ಮೂಲಕ ಅರ್ಹತೆ ಮತ್ತು ಆಯ್ಕೆ ಪ್ರಕ್ರಿಯೆಯ ವಿವರಗಳನ್ನು ಪರಿಶೀಲಿಸಬಹುದು. ನೇಮಕಾತಿ ಜಾಹೀರಾತಿನ ಪ್ರಕಾರ, ಸಂಸ್ಥೆಯಲ್ಲಿ ಒಟ್ಟು 294 ಗ್ರೇಡ್ ಬಿ ಅಧಿಕಾರಿಗಳು ಮತ್ತು 9 ಸಹಾಯಕ ವ್ಯವಸ್ಥಾಪಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ವಿದ್ಯಾರ್ಹತೆ:
ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿಯ ಅಧಿಕಾರಿ ಗ್ರೇಡ್ ಬಿ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಯಾವುದೇ ವಿಷಯದಲ್ಲಿ ಶೇ.೫೫ರಷ್ಟು ಅಂಕಗಳೊಂದಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ಯಾವ ಪ್ರಾದೇಶಿಕ ಕೇಂದ್ರದಲ್ಲಿ ನೇಮಕಾತಿ ಬಯಸುತ್ತಾರೋ, ಅಲ್ಲಿನ ಪ್ರಾದೇಶಿಕ ಭಾಷೆಯನ್ನು ಓದಲು, ಬರೆಯಲು, ಅರ್ಥಮಾಡಿಕೊಳ್ಳಲು ಮತ್ತು ಮಾತನಾಡಲು ತಿಳಿದಿರಬೇಕು.

 

 

ವಯೋಮಿತಿ:
ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿಯ ಅಧಿಕಾರಿ ಗ್ರೇಡ್ ಬಿ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಓಬಿಸಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ ಶ್ರೇಣಿ : ರೂ.55200-108404/- ಪ್ರತಿ ತಿಂಗಳು

ಅರ್ಜಿ ಶುಲ್ಕ 
ಸಿಬ್ಬಂದಿ ಅಭ್ಯರ್ಥಿಗಳು: ಯಾವುದೇ ಶುಲ್ಕ ಇರುವುದಿಲ್ಲ
ಎಸ್ಸಿ/ಎಸ್ಟಿ/ಅಂಗವಿಕಲ ಅಭ್ಯರ್ಥಿಗಳು: ರೂ.100/-
ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳು: ರೂ.850/-
ಪಾವತಿ ವಿಧಾನ: ಆನ್‌ಲೈನ್

ಪ್ರಮುಖ ದಿನಾಂಕಗಳು
ಆನ್‌ಲೈನ್ ಅರ್ಜಿ ನಮೂನೆಯ ಬಿಡುಗಡೆ 28ನೇ ಮಾರ್ಚ್ 2022
ಆನ್‌ಲೈನ್ ಅರ್ಜಿ ನಮೂನೆಯನ್ನು ಸಲ್ಲಿಸಲು ಕೊನೆಯ ದಿನಾಂಕ 18 ಏಪ್ರಿಲ್ 2022

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  28ನೇ ಮಾರ್ಚ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  18 ಏಪ್ರಿಲ್ 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

 

error: Content is protected !!