.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಂ.ಜಿ.ನರೇಗಾ ಸಾಮಾಜಿಕ ಪರಿಶೋಧನಾ ಸಂಘದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ಹೆಸರು: ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಹಾಗೂ ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ.
ಉದ್ಯೋಗ ಸ್ಥಳ: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಹುದ್ದೆಗಳ ಸಂಖ್ಯೆ: 35
ಹುದ್ದೆಗಳು ಮತ್ತು ವೇತನಶ್ರೇಣಿ ವಿವರ
ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ : 01 ಹುದ್ದೆ ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ : 34 ಹುದ್ದೆಗಳು |
ವಿದ್ಯಾರ್ಹತೆ : ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು ಜೊತೆಗೆ ಕಂಪ್ಯೂಟರ್ ಬಳಕೆಯ ಜ್ಞಾನ ಹೊಂದಿರಬೇಕು.
ಇತರೆ ಅರ್ಹತೆಗಳು/ಅನುಭವ : ಅಪೇಕ್ಷಣೀಯ
• ಸಾಮಾಜಿಕ ಪರಿಶೋಧನೆ ನಿರ್ವಹಿಸಿದ ಅನುಭವ – 2 ರಿಂದ 3 ವರ್ಷ
• ಸ್ವಯಂ ಸೇವಾ ಸಂಘ/ಸಂಸ್ಥೆಗಳಲ್ಲಿ ಗ್ರಾಮೀಣಾಭಿವೃದ್ಧಿ ಚಟುವಟಿಕೆಗಳಲ್ಲಿ ಕಾರ್ಯನಿರ್ವಹಿಸಿದ ಅನುಭವ – 3 ರಿಂದ 5 ವರ್ಷ
• ನರೇಗಾ ಕಾರ್ಯಕ್ರಮದ ಅನುಭವ – 2 ವರ್ಷ
ಆಯ್ಕೆ ವಿಧಾನ : ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಳಾಸ : ನಿರ್ದೇಶಕರು, ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ,
ಮೊದಲನೇ ಮಹಡಿ, ಅಭಯ ಕಾಂಪ್ಲೆಕ್ಸ್, ಕೊಳೆಗೇರಿ ಅಭಿವೃದ್ದಿ ಮಂಡಳಿ ಕಟ್ಟಡ, ನಂ. 55, ರಿಸಲ್ದಾರ್ ರಸ್ತೆ, ಶೇಷಾದ್ರಿಪುರಂ, ಬೆಂಗಳೂರು – 560020
ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 17, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 05, 2022
Notification & Application Form |