ಜಿಲ್ಲಾ ಪಂಚಾಯಿತಿಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ 2021

 

ಕರ್ನಾಟಕ ರಾಜ್ಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜನಜೀವನ ಮಿಶನ್ ಹಾಗೂ ಸ್ವಚ್ಛ ಭಾರತ ಗ್ರಾಮೀಣ ಯೋಜನೆಯಡಿ ರಾಜ್ಯ ಕಚೇರಿ ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ತಾತ್ಕಾಲಿಕ ಗುತ್ತಿಗೆ ಅಥವಾ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.

ಹುದ್ದೆಗಳ ವಿವರ
ಜೂನಿಯರ್ ಕನ್ಸಲ್ಟೆಂಟ್ – 01
ಯೋಜನಾ ವ್ಯವಸ್ಥಾಪಕರು – 01
ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನ ತಜ್ಞರು – 01
ನೈರ್ಮಲ್ಯ ಮತ್ತು ನೈರ್ಮಲ್ಯ ಪ್ರಚಾರ ಸಲಹೆಗಾರ – 01
ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಸಮಾಲೋಚಕರು – 05
ಎಮ್ ಎಚ್ ಎಂ ಕನ್ಸಲ್ಟಂಟ್ – 01
ಜಿಲ್ಲಾ ಯೋಜನಾ ವ್ಯವಸ್ಥಾಪಕರು – 04
ಜಿಲ್ಲಾ ಎಂ ಐ ಎಸ್ ಸಮಾಲೋಚಕರು – 02
ನೈರ್ಮಲ್ಯ ಹಾಗೂ ಶುಚಿತ್ವದ ಸಮಾಲೋಚಕರು – 02
ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು – 01
ಘನ ಮತ್ತು ದ್ರವ ತಾಜ್ ತಾಜ್ಯ ನಿರ್ವಹಣೆ ಸಮಾಲೋಚಕರು – 04

 

 

ಒಟ್ಟು ಹುದ್ದೆಗಳು: 23
ಉದ್ಯೋಗ ಸ್ಥಳ: ಕರ್ನಾಟಕ

ವಿದ್ಯಾರ್ಹತೆ: ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ, ಅಥವಾ ಸ್ನಾತಕೋತ್ತರ ಪದವಿ ಮುಗಿಸಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ಕಾರ್ಯಾನುಭವ, ವೇತನ ಸೇರಿ ಮುಂತಾದ ಹೆಚ್ಚಿನ ವಿವರಗಳನ್ನು ಅಧಿಕೃತ ಅಧಿಸೂಚನೆಯಲ್ಲಿ ವಿವರಿಸಲಾಗಿದ್ದು, ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

 

 

ವೇತನ ಶ್ರೇಣಿ: ರೂ.15,000/- to ರೂ. 75,000/-

ಅರ್ಜಿ ಸಲ್ಲಿಸಬೇಕಾದ ವಿಳಾಸ :
ಆಯುಕ್ತರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಎರಡನೇ ಮಹಡಿ, ಕೆಎಚ್ ಬಿ ಕಟ್ಟಡ, ಕಾವೇರಿಭವನ, ಕೆ ಜಿ ರಸ್ತೆ, ಬೆಂಗಳೂರು-560009

ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಜೊತೆಗೆ ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಅನುಭವ, ಪ್ರಮುಖ ಸಾಮರ್ಥ್ಯಗಳು ಮತ್ತು Resume ಯನ್ನು ಈ ವಿಳಾಸಕ್ಕೆ ದಿನಾಂಕ 27 ಸೆಪ್ಟಂಬರ್ 2021 ಸಂಜೆ 05:30 ರೊಳಗಾಗಿ ಸಲ್ಲಿಸಬೇಕು.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 8 ಸೆಪ್ಟೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27 ಸೆಪ್ಟೆಂಬರ್ 2021

Website
Notification 
error: Content is protected !!