ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ
ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ವಿಭಾಗ ಧಾರವಾಡ ಜಿಲ್ಲಾ ವಿಭಾಗ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ತಾತ್ಕಾಲಿಕವಾಗಿ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ |
ಹುದ್ದೆಗಳ ಹೆಸರು: | MIS ಸಮಾಲೋಚಕರು |
ಒಟ್ಟು ಹುದ್ದೆಗಳು | 01 |
ಅರ್ಜಿ ಸಲ್ಲಿಸುವ ಬಗೆ | ಆಫ್ ಲೈನ್ |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಪದವಿ ಹಾಗೂಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 25,000/- ರೂ ವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಿದ ನಂತರ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ಕಚೇರಿಯ ವಿಳಾಸ:
ಕಾರ್ಯನಿರ್ವಾಹಕ ಇಂಜಿನೀಯರರು , ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ , ಲೋಕೂರ ಬಿಲ್ಡಿಂಗ್ ಯು.ಬಿ.ಹಿಲ್, ಧಾರವಾಡ , 5800017
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 28 ಜುಲೈ 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 2 ಆಗಸ್ಟ್ 2022 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |