ಹೊಸ ನೇಮಕಾತಿ ಅಧಿಸೂಚನೆ 2022
REPCO Bank Recruitment 2022: ರೆಪ್ಕೊ ಬ್ಯಾಂಕಿನಲ್ಲಿ ಖಾಲಿಯಿರುವ ಕಿರಿಯ ಸಹಾಯಕ/ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ. REPCO Bank
ಇಲಾಖೆ ಹೆಸರು: | ರೆಪ್ಕೊ ಬ್ಯಾಂಕಿನಲ್ಲಿ REPCO Bank |
ಹುದ್ದೆಗಳ ಹೆಸರು: | ಕಿರಿಯ ಸಹಾಯಕ/ ಕ್ಲರ್ಕ್ |
ಒಟ್ಟು ಹುದ್ದೆಗಳು | 50 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆಯ ಜೊತೆಗೆ ಅಭ್ಯರ್ಥಿಯು ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ದಿನಾಂಕ 30/09/2022ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 28 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ ಸಡಿಲಿಕೆ
ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ ಸಡಿಲಿಕೆ
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ ಸಡಿಲಿಕೆ
ಉದ್ಯೋಗ ಸುದ್ದಿ – ಭಾರತೀಯ ಅಂಚೆ ಇಲಾಖೆಯಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ 2022
ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,900 ರಿಂದ ರೂ. 47,920 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 500
ಸಾಮಾನ್ಯ, ಇತರೆ ಅಭ್ಯರ್ಥಿಗಳು – ರೂ. 900
(ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು)
ಉದ್ಯೋಗ ಸುದ್ದಿ – ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ
ಆಯ್ಕೆ ವಿಧಾನ:
ಆನ್‌ಲೈನ್ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳಿಗೆ ಸಂದರ್ಶನ ಇರುವುದಿಲ್ಲ. ಆನ್‌ಲೈನ್ ಪರೀಕ್ಷಾ ಮಾದರಿ ಅಧಿಸೂಚನೆಯಲ್ಲಿ ನೀಡಲಾಗಿದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ನವೆಂಬರ್ 05, 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ನವೆಂಬರ್ 25, 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |