ಮಹಿಳೆಯರಿಗೆ ಇಲ್ಲಿದೆ ಒಂದು ಗುಡ್ ನ್ಯೂಸ್ ! 3 ಲಕ್ಷ ಸಾಲ ಪಡೆಯಿರಿ

Telegram Group

‘ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ’ಯ ಸಹಯೋಗದಲ್ಲಿ ಜಿಲ್ಲೆಯ ನಿರುದ್ಯೋಗಿ ಮಹಿಳೆಯರಿಗಾಗಿ ಸ್ವಯಂ ಉದ್ಯೋಗ ಹೊಂದಲು ಉದ್ಯೋಗಿನಿ ಯೋಜನೆಯಡಿ ಸಾಲ ಸೌಲಭ್ಯ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್‌.ನಟರಾಜ್‌ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ಮತ್ತು ಸಾಮಾನ್ಯ ಮಹಿಳೆ(Woman)ಯರು ಯಾವುದಾದರೂ ಲಾಭದಾಯಕ ಚಟುವಟಿಕೆಯಲ್ಲಿ ಸ್ವಂತ ಉದ್ಯೋಗವನ್ನು ಕೈಗೊಳ್ಳಲು ಬ್ಯಾಂಕಿನಿಂದ ಗರಿಷ್ಠ 3 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ನೀಡಲಾಗುವುದು.

 

 

ವಿಧವೆ, ಅಂಗವಿಕಲ ಹಾಗೂ ಸಂಕಷ್ಟದಲ್ಲಿರುವ ಸಾಮಾನ್ಯ ವರ್ಗದ ಮಹಿಳೆಯರಿಗೆ ಶೇ.30ರಷ್ಟು ಅಥವಾ ಗರಿಷ್ಠ 90 ಸಾವಿರ ರೂ.ಗಳ ಹಾಗೂ ಪರಿಶಿಷ್ಟ ಜಾತಿ, ಪಂಗಡದ ಮಹಿಳೆಯರಿಗೆ ಶೇ.50ರಷ್ಟು ಅಥವಾ ಗರಿಷ್ಠ 1,50,000 ರೂ.ಗಳವರೆಗೆ ಸಹಾಯಧನವನ್ನು ನೀಡಲಾಗುವುದು ಎಂದು ಹೇಳಿದ್ದಾರೆ.

 

ಈ ಸೌಲಭ್ಯಕ್ಕೆ 18ರಿಂದ 55 ವರ್ಷದೊಳಗಿನ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ. ಪರಿಶಿಷ್ಟ ಜಾತಿ/ಪಂಗಡದವರಾಗಿದ್ದಲ್ಲಿ ವಾರ್ಷಿಕ ಆದಾಯ 2 ಲಕ್ಷ ರೂ.ಗಳ ಒಳಗಿರಬೇಕು. ಸಾಮಾನ್ಯ ವರ್ಗದವರಾಗಿದ್ದಲ್ಲಿ ವಾರ್ಷಿಕ ಆದಾಯ 1.5 ಲಕ್ಷ ರೂ.ಗಳ ಒಳಗಿರಬೇಕು.

 

 

 

ಆಸಕ್ತರು ಜಾತಿ/ಆದಾಯ ಪ್ರಮಾಣ ಪತ್ರ, ಬಿಪಿಎಲ್‌ ಕಾರ್ಡ್‌, ಆಧಾರ್‌ ಕಾರ್ಡ್‌, ಶಾಲಾ ವರ್ಗಾವಣೆ ಪತ್ರ, ಎಸ್‌ಎಸ್‌ಎಲ್‌ಸಿ ಅಂಕ ಪಟ್ಟಿ, ಯೋಜನಾ ವರದಿ, ಬ್ಯಾಂಕ್‌ ಪಾಸ್‌ ಪುಸ್ತಕದ ಪ್ರತಿಯೊಂದಿಗೆ (ಮೊದಲನೇ ಹಾಗೂ ಕೊನೆಯ ಪುಟ) ಅರ್ಜಿ ಸಲ್ಲಿಸಬಹುದಾಗಿದೆ.

 

ವಿಧವೆ, ಅಂಗವಿಕಲರು, ಸಂಕಷ್ಟಗೊಳಗಾದ ಮಹಿಳೆಯರು ತಮ್ಮ ಅರ್ಜಿಯೊಂದಿಗೆ ಪ್ರಮಾಣ ಪತ್ರವನ್ನು ಲಗತ್ತಿಸಬೇಕು. ಅರ್ಹ ಮಹಿಳೆಯರು ಆಯಾ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಲ್ಲಿ ನ.23ರೊಳಗೆ ಅರ್ಜಿಯನ್ನು ನ.30ರೊಳಗಾಗಿ ಈ ಕಚೇರಿಗೆ ಸಲ್ಲಿಸಬಹುದು. ಅಥವಾ ಆಯಾ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಥವಾ ಅಭಿವೃದ್ಧಿ ನಿರೀಕ್ಷಕರು ಉಪನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಭಾರತೀಯ ರೆಡ್‌ಕ್ರಾಸ್‌ ಭವನ, ಚರ್ಚ್ ಸರ್ಕಲ್‌, ಅಶೋಕ ರಸ್ತೆ, ತುಮಕೂರು ಇವರನ್ನು ಸಂಪರ್ಕಿಸಹುದು ಎಂದು ತಿಳಿಸಿದ್ದಾರೆ.

Telegram Group
error: Content is protected !!