ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿ ಸುದ್ದಿ

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತದ ಮೂಲಕ 2020-21 ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ ಬ್ಯಾಂಕ್‌ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಕಿರು ಸಾಲ/ ಸ್ವ ಸಹಾಯ ಗುಂಪುಗಳಿಗೆ ಸಹಾಯಧನ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಕೌಶಲ್ಯಾಭಿವೃದ್ಧಿ/ಉದ್ಯಮಶೀಲತಾ ತರಬೇತಿ ಯೋಜನೆಗಳಲ್ಲಿ ಸೌಲಭ್ಯ ಪಡೆಯಲಿಚ್ಛಿಸುವ ಅರ್ಹ ಫಲಾನುಭವಿಗಳಿಂದ ಆನ್‌ಲೈನ್ / ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ಪ್ರವರ್ಗ-1 ರ ಕೋಲಿ, ಗಂಗಾಮತ, ಬೆಸ್ತ, ಕಬ್ಬಲಿಗ, ಮೊಗವೀರ, ಅಂಬಿಗ, ಬರ‍್ಕಿ/ಬಾರಿಕ, ಬೆಸ್ತರ್, ಭೋಯಿ, ರಾಜಬೋಯಿ, ಬುಂಡೆ-ಬೆಸ್ತರ್, ದಾಲ್ಚಿ, ದಾವತ್, ಗಬಿಟ್, ಗಲಾಡಕೊಂಕಣಿ, ಗಂಗೆಮಕ್ಕಳು, ಗಂಗಾಕುಲ, ಗಂಗಾಮತಸ್ಥ, ಗಂಗಾಪುತ್ರ, ಗೌರಿಮತ, ಬುಂಡೆ-ಬೆಸ್ತ/ಗುಡೆಬೆಸ್ತ, ಹರಕಂತ್ರ, ಜಲಗಾರ, ಕಬ್ಬೇರ/ಕಬ್ಬೇರ್, ಕಬ್ಬಿಲಿ, ಕಹರ್, ಖಾರ್ವಿ/ಕೊಂಕಣಖಾರ್ವಿ, ಕೋಳಿಮಹದೇವ್, ಮಡ್ಡರ್, ಮೀನಗಾರ್, ಮಗೇರ್, ಮುಕ್ಕವಾನ್, ಪರಿವಾರ, ಸಿವಿಯರ್, ಸುಣಗಾರ, ತೊರೆಯ, ವಾಗಿ ಜಾತಿಗೆ ಸೇರಿದವರಾಗಿರಬೇಕು.



ಅರ್ಜಿಯನ್ನು ಜಿಲ್ಲೆಯ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ/ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಿಂದ ಪಡೆದು ನಿಗಮದ ವೆಬ್ ಸೈಟ್ ಗೆ ಆನ್ ಲೈನ್ ಮೂಲಕ ಸಹ ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಅಗಸ್ಟ್ 12 ಆಗಿದ್ದು ಅರ್ಜಿ ಹಾಗೂ ಹೆಚ್ಚಿನ ವಿವರ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ/ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಜಿಲ್ಲಾ ಆಡಳಿತ ಭವನ, ರೂಂ. ನಂ. 202, 2 ನೇ ಮಹಡಿ ಗದಗ ಜಿಲ್ಲೆಯ ಕಚೇರಿಗೆ ಭೇಟಿ ನೀಡಬಹುದಾಗಿದೆ.



error: Content is protected !!