SBI ಇಂದ ಬೃಹತ್ ನೇಮಕಾತಿ 2021 : 1226 ಹುದ್ದೆಗಳಿಗೆ ಅರ್ಜಿ ಅಹ್ವಾನ : SBI CBO Recruitment 2021

Telegram Group

 

ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಸರ್ಕಲ್ ಬೇಸ್ಡ್‌ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಲಾದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು.

SBI CBO Recruitment 2021: Details of Vacancies

ಹುದ್ದೆ : ಸರ್ಕಲ್ ಬೇಸ್ಡ್‌ ಆಫೀಸರ್
ಉದ್ಯೋಗ ಸ್ಥಳ: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.
ಒಟ್ಟು ಹುದ್ದೆಗಳ ಸಂಖ್ಯೆ: ಒಟ್ಟು 1226 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಒಟ್ಟು 278 ಹುದ್ದೆಗಳು ಖಾಲಿ ಇದೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
(ಅನುಭವ : ಬ್ಯಾಂಕಿನಲ್ಲಿ ಅಧಿಕಾರಿಯಾಗಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು

ವಯೋಮಿತಿ:
ಅಭ್ಯರ್ಥಿಗಳಿಗೆ ಕನಿಷ್ಠ 21 ಹಾಗೂ ಗರಿಷ್ಠ 30 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

 

 

ವಯೋಮಿತಿ ಸಡಿಲಿಕೆ :
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ವಿಧಾನ :
ಆನ್‌ಲೈನ್‌ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ವೇತನ ಶ್ರೇಣಿ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 36,000 ರಿಂದ ರೂ. 63,840 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ :
ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ. ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು ರೂ. 750 ಅರ್ಜಿ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ :
ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 09, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 29, 2021

Apply Online – Click Here
Notification – Click Here
Telegram Group
error: Content is protected !!