SBI Clerk Junior Associate Notification 2022: ಭಾರತೀಯ ಸ್ಟೇಟ್ ಬ್ಯಾಂಕ್ 5008 ಜೂನಿಯರ್ ಅಸೋಸಿಯೇಟ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಸೆಪ್ಟೆಂಬರ್ 07 ರಿಂದ 27 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಭಾರತೀಯ ಸ್ಟೇಟ್ ಬ್ಯಾಂಕ್ |
ಹುದ್ದೆಗಳ ಹೆಸರು: | ಜೂನಿಯರ್ ಅಸೋಸಿಯೇಟ್ ಕ್ಲರ್ಕ್ ಹುದ್ದೆಗಳ ಭರ್ತಿ |
ಒಟ್ಟು ಹುದ್ದೆಗಳು | 5008 (ಕರ್ನಾಟಕದಲ್ಲಿ ಹುದ್ದೆಗಳ ಸಂಖ್ಯೆ 316 ) |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಯಾವುದೇ ವಿಷಯದಲ್ಲಿ ಪದವಿ ಪಾಸ್ ಮಾಡಿರಬೇಕು.
ವಿಶೇಷ ಸೂಚನೆ
ಯಾವುದೇ ಪದವಿಯ ಅಂತಿಮ ಸೆಮಿಸ್ಟರ್ / ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆದರೆ ತಾತ್ಕಾಲಿಕವಾಗಿ ಆಯ್ಕೆಯಾದ ನಂತರ ಪದವಿ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ.
ವಯೋಮಿತಿ:
ದಿನಾಂಕ 01-08-2022 ಕ್ಕೆ ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 28 ವರ್ಷ ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮ ಸರ್ಕಾರದ ಆದೇಶದಂತೆ ಅನ್ವಯವಾಗಲಿದೆ.
ಇದನ್ನೂ ಓದಿ: ಮೀನುಗಾರಿಕೆ ಇಲಾಖೆ ನೇಮಕಾತಿ 2022
ವೇತನಶ್ರೇಣಿ:
ಭಾರತೀಯ ಸ್ಟೇಟ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.17900 – 47920.
ಅರ್ಜಿ ಶುಲ್ಕ:
ಜೆನೆರಲ್ / ಒಬಿಸಿ / ಇ ಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ ರೂ.750.
ಇತರೆ ಅಭ್ಯರ್ಥಿಗಳಿಗೆ ಪ್ರೋಸೆಸಿಂಗ್ ಶುಲ್ಕ ಮಾತ್ರ ಇರುತ್ತದೆ.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್ ಪ್ರಿಲಿಮ್ಸ್ ಪರೀಕ್ಷೆ, ಮೇನ್ಸ್ ಪರೀಕ್ಷೆ, ಸ್ಥಳೀಯ ಭಾಷಾ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಪ್ರಿಲಿಮ್ಸ್ / ಮೇನ್ಸ್ ಪರೀಕ್ಷೆ ಅಂಕಗಳನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ 1:3 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಇದರಲ್ಲಿ ಬ್ಯಾಂಕ್ ನಿಗದಿಪಡಿಸಿದ ಕನಿಷ್ಠ ಅಂಕಗಳನ್ನು ಅಭ್ಯರ್ಥಿಗಳು ಗಳಿಸಬೇಕು. ನಂತರ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಮೊದಲನೆಯದಾಗಿ, ಎಸ್‌ಬಿಐ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
- ಅಪ್ಲಿಕೇಶನ್ ಆನ್‌ಲೈನ್ ಮೋಡ್ ಅನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಗಳಿಗಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
- ಎಸ್‌ಬಿಐ ಜೂನಿಯರ್ ಅಸೋಸಿಯೇಟ್ಸ್ ಆನ್‌ಲೈನ್‌ನಲ್ಲಿ ಅನ್ವಯಿಸಿ – ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.
- ಎಸ್‌ಬಿಐ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
- ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
- ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 07-09-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 27-09-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |