SBI ನಲ್ಲಿ 5008 ಕ್ಲರ್ಕ್ ಹುದ್ದೆಗಳ ಬೃಹತ್ ನೇಮಕಾತಿ 2022 – SBI Clerk Junior Associate Notification 2022

SBI Clerk Junior Associate Notification 2022: ಭಾರತೀಯ ಸ್ಟೇಟ್ ಬ್ಯಾಂಕ್ 5008 ಜೂನಿಯರ್ ಅಸೋಸಿಯೇಟ್‌ ಕ್ಲರ್ಕ್‌ ಹುದ್ದೆಗಳ ಭರ್ತಿಗೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಸೆಪ್ಟೆಂಬರ್ 07 ರಿಂದ 27 ರವರೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಭಾರತೀಯ ಸ್ಟೇಟ್ ಬ್ಯಾಂಕ್
ಹುದ್ದೆಗಳ ಹೆಸರು: ಜೂನಿಯರ್ ಅಸೋಸಿಯೇಟ್‌ ಕ್ಲರ್ಕ್‌ ಹುದ್ದೆಗಳ ಭರ್ತಿ
ಒಟ್ಟು ಹುದ್ದೆಗಳು  5008 (ಕರ್ನಾಟಕದಲ್ಲಿ ಹುದ್ದೆಗಳ ಸಂಖ್ಯೆ 316 )
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಯಾವುದೇ ವಿಷಯದಲ್ಲಿ ಪದವಿ ಪಾಸ್ ಮಾಡಿರಬೇಕು.
ವಿಶೇಷ ಸೂಚನೆ
ಯಾವುದೇ ಪದವಿಯ ಅಂತಿಮ ಸೆಮಿಸ್ಟರ್‌ / ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆದರೆ ತಾತ್ಕಾಲಿಕವಾಗಿ ಆಯ್ಕೆಯಾದ ನಂತರ ಪದವಿ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ.

ವಯೋಮಿತಿ:
ದಿನಾಂಕ 01-08-2022 ಕ್ಕೆ ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 28 ವರ್ಷ ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮ ಸರ್ಕಾರದ ಆದೇಶದಂತೆ ಅನ್ವಯವಾಗಲಿದೆ.


ಇದನ್ನೂ ಓದಿ:  ಮೀನುಗಾರಿಕೆ ಇಲಾಖೆ ನೇಮಕಾತಿ 2022


ವೇತನಶ್ರೇಣಿ:
ಭಾರತೀಯ ಸ್ಟೇಟ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ  ರೂ.17900 – 47920.

ಅರ್ಜಿ ಶುಲ್ಕ:
ಜೆನೆರಲ್ / ಒಬಿಸಿ / ಇ ಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ ರೂ.750.
ಇತರೆ ಅಭ್ಯರ್ಥಿಗಳಿಗೆ ಪ್ರೋಸೆಸಿಂಗ್ ಶುಲ್ಕ ಮಾತ್ರ ಇರುತ್ತದೆ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್‌ ಪ್ರಿಲಿಮ್ಸ್‌ ಪರೀಕ್ಷೆ, ಮೇನ್ಸ್‌ ಪರೀಕ್ಷೆ, ಸ್ಥಳೀಯ ಭಾಷಾ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಿಲಿಮ್ಸ್‌ / ಮೇನ್ಸ್‌ ಪರೀಕ್ಷೆ ಅಂಕಗಳನ್ನು ಪರಿಗಣಿಸಿ ಮೆರಿಟ್‌ ಆಧಾರದ ಮೇಲೆ 1:3 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಇದರಲ್ಲಿ ಬ್ಯಾಂಕ್‌ ನಿಗದಿಪಡಿಸಿದ ಕನಿಷ್ಠ ಅಂಕಗಳನ್ನು ಅಭ್ಯರ್ಥಿಗಳು ಗಳಿಸಬೇಕು. ನಂತರ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಮೊದಲನೆಯದಾಗಿ, ಎಸ್‌ಬಿಐ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
  • ಅಪ್ಲಿಕೇಶನ್ ಆನ್‌ಲೈನ್ ಮೋಡ್ ಅನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಗಳಿಗಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
  • ಎಸ್‌ಬಿಐ ಜೂನಿಯರ್ ಅಸೋಸಿಯೇಟ್ಸ್ ಆನ್‌ಲೈನ್‌ನಲ್ಲಿ ಅನ್ವಯಿಸಿ – ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ಎಸ್‌ಬಿಐ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
  • ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  07-09-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  27-09-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!