ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಭಾರತೀಯ ಸ್ಟೇಟ್ ಬ್ಯಾಂಕ್ ನೇಮಕಾತಿ ಅಧಿಸೂಚನೆ 2021

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 46 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಅನುಭವಿ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ​​ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 02 / ಸೆಪ್ಟೆಂಬರ್ / 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ
*ಸಹಾಯಕ ಮ್ಯಾನೇಜರ್ / ಎಂಜಿನಿಯರ್ (ಸಿವಿಲ್/ಎಲೆಕ್ಟ್ರಿಕಲ್)
ಒಟ್ಟು ಹುದ್ದೆಗಳು: 46
ಉದ್ಯೋಗ ಸ್ಥಳ: ಭಾರತದಾದ್ಯಂತ

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ / ಬೋರ್ಡ್ ಯಿಂದ ಸಿವಿಲ್(Civil Engg ) ಮತ್ತು ಎಲೆಕ್ಟ್ರಿಕಲ್ ಎಂಜಿನಿಯರಿಂಗ್(Electrical Engg) ವಿಭಾಗಗಳಲ್ಲಿ ಪದವಿ / ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು ಹಾಗೂ ಸೇವಾನುಭವವನ್ನು ಹೊಂದಿರಬೇಕು.

 

 

ವಯೋಮಿತಿ:
01/ಏಪ್ರಿಲ್/2021 ರ ಅನ್ವಯ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಟ 30 ವರ್ಷಗಳನ್ನು ಮೀರಿರಬಾರದು.

ಕಾಯ್ದಿರಿಸಿದ ವರ್ಗಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನಶ್ರೇಣಿ:
ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಅಧಿಕೃತ ಅಧಿಸೂಚನೆ ಅನ್ವಯ ತಿಂಗಳಿಗೆ ರೂಪಾಯಿ 36,000/- ರಿಂದ ರೂಪಾಯಿ 63,840/- ಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : ರೂಪಾಯಿ 750/- ಅರ್ಜಿ ಶುಲ್ಕ
SC, ST, PwD ಅಭ್ಯರ್ಥಿಗಳಿಗೆ : ಯಾವುದೇ ಶುಲ್ಕವಿಲ್ಲ

 

 

ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13 ಆಗಸ್ಟ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 2 ಸೆಪ್ಟೆಂಬರ್ 2021

Website
Notification
Apply Online
Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

Scroll to Top