ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 46 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಅನುಭವಿ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 02 / ಸೆಪ್ಟೆಂಬರ್ / 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ
*ಸಹಾಯಕ ಮ್ಯಾನೇಜರ್ / ಎಂಜಿನಿಯರ್ (ಸಿವಿಲ್/ಎಲೆಕ್ಟ್ರಿಕಲ್)
ಒಟ್ಟು ಹುದ್ದೆಗಳು: 46
ಉದ್ಯೋಗ ಸ್ಥಳ: ಭಾರತದಾದ್ಯಂತ
ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ / ಬೋರ್ಡ್ ಯಿಂದ ಸಿವಿಲ್(Civil Engg ) ಮತ್ತು ಎಲೆಕ್ಟ್ರಿಕಲ್ ಎಂಜಿನಿಯರಿಂಗ್(Electrical Engg) ವಿಭಾಗಗಳಲ್ಲಿ ಪದವಿ / ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು ಹಾಗೂ ಸೇವಾನುಭವವನ್ನು ಹೊಂದಿರಬೇಕು.
ವಯೋಮಿತಿ:
01/ಏಪ್ರಿಲ್/2021 ರ ಅನ್ವಯ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಟ 30 ವರ್ಷಗಳನ್ನು ಮೀರಿರಬಾರದು.
ಕಾಯ್ದಿರಿಸಿದ ವರ್ಗಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನಶ್ರೇಣಿ:
ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಅಧಿಕೃತ ಅಧಿಸೂಚನೆ ಅನ್ವಯ ತಿಂಗಳಿಗೆ ರೂಪಾಯಿ 36,000/- ರಿಂದ ರೂಪಾಯಿ 63,840/- ಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : ರೂಪಾಯಿ 750/- ಅರ್ಜಿ ಶುಲ್ಕ
SC, ST, PwD ಅಭ್ಯರ್ಥಿಗಳಿಗೆ : ಯಾವುದೇ ಶುಲ್ಕವಿಲ್ಲ
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಆನ್ಲೈನ್ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13 ಆಗಸ್ಟ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 2 ಸೆಪ್ಟೆಂಬರ್ 2021
Website |
Notification |
Apply Online |