ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಕುರಿತು ಪತ್ರಿಕಾ ಪ್ರಕಟಣೆ ಪ್ರಕಟಿಸಲಾಗಿದೆ

 

ಆಯೋಗದ ಅಧಿಸೂಚನೆ ಸಂಖ್ಯೆ: ಇ(2)7271/2018-19/ಪಿಎಸ್‌ಸಿ ದಿನಾಂಕ:11-02-2019 ಯಲ್ಲಿ ಅಧಿಸೂಚಿಸಲಾದ ಬೆಂಗಳೂರು ನಗರದ ಸಿವಿಲ್ ನ್ಯಾಯಾಲಯ, ಲಘು ವ್ಯವಹಾರಗಳ ನ್ಯಾಯಾಲಯ ಮತ್ತು ರಾಜ್ಯದ ವಿವಿಧ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಗಳಲ್ಲಿನ ಉಳಿಕೆ ಮೂಲ ವೃಂದದ-219 ಪ್ರಥಮ ದರ್ಜೆ ಸಹಾಯಕರ ಹುದ್ದೆಗಳಿಗೆ ಕರ್ನಾಟಕ ನಾಗರೀಕ ಸೇವೆಗಳು (ಲಿಪಿಕ ಹುದ್ದೆಗಳ ನೇಮಕಾತಿ) ನಿಯಮಗಳು 1978 ಮತ್ತು ಕಾಲಕಾಲಕ್ಕೆ ಚಾಲ್ತಿಯಲ್ಲಿರುವ ನಿಯಮಗಳನುಸಾರ ಹಾಗೂ ಆಯೋಗದ ದಿನಾಂಕ:27-02-2020 ರ ಪತ್ರಿಕಾ ಪ್ರಕಟಣೆಯನ್ವಯ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಪಡೆಯಲಾದ ಆದ್ಯತಾನುಸಾರ ದಿನಾಂಕ:09-11-2020 ರಂದು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಿ,

 

 

ಸದರಿ ಪಟ್ಟಿಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಅಧಿಸೂಚನೆ ಹೊರಡಿಸಿದ ದಿನಾಂಕದಿಂದ 07 ದಿವಸಗಳೊಳಗಾಗಿ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಸೂಚಿಸಲಾಗಿತ್ತು. ಅದರಂತೆ, ನಿಗದಿತ ದಿನಾಂಕದೊಳಗೆ ಸ್ವೀಕೃತವಾದ ಆಕ್ಷೇಪಣೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಸಿದ್ಧಪಡಿಸಲಾದ ಅಂತಿಮ ಆಯ್ಕೆ ಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಈ ಮೂಲಕ ಪ್ರಕಟಿಸಿದೆ.

ಆಯ್ಕೆ ಪಟ್ಟಿ ಡೌನ್ಲೋಡ್ ಲಿಂಕ್

error: Content is protected !!