ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಒಟ್ಟು 07 ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ :- 23-11-2021 ರಿಂದ 30-11-2021 ರ ರಾತ್ರಿ 11:59 ರವರೆಗೆ ಮಾತ್ರ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಒಟ್ಟು ಹುದ್ದೆಗಳು: 7
ಉದ್ಯೋಗ ಸ್ಥಳ: ಶಿವಮೊಗ್ಗ ಜಿಲ್ಲಾ
ಶೈಕ್ಷಣಿಕ ವಿದ್ಯಾರ್ಹತೆ:
ಪ್ರೋಸೆಸ್ ಜಾರಿಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್. ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿಯನ್ನು ಹೊಂದಿರಬೇಕು.
1) ಸಾಮಾನ್ಯ ಅಭ್ಯರ್ಥಿಗಳು ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು ಹಾಗೂ ಗರಿಷ್ಠ 35 ವರ್ಷ ವಯಸ್ಸನ್ನು ಮೀರಿರಬಾರದು.
2) 2ಎ, 2ಬಿ, 3ಎ, 3ಬಿ, ಅಭ್ಯರ್ಥಿಗಳು ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು ಹಾಗೂ ಗರಿಷ್ಠ 38 ವರ್ಷ ವಯಸ್ಸನ್ನು ಮೀರಿರಬಾರದು.
3) ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ರ ಅಭ್ಯರ್ಥಿಗಳು ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು ಹಾಗೂ ಗರಿಷ್ಠ 40 ವರ್ಷ ವಯಸ್ಸನ್ನು ಮೀರಿರಬಾರದು.
ವಿಶೇಷ ಸೂಚನೆ: ವಿಧವೆಯರಿಗೆ ಮತ್ತು ಅಂಗವಿಕಲರಿಗೆ 10 ವರ್ಷಗಳ ಸಡಿಲಿಕೆ ಹಾಗೂ ಈಗಾಗಲೇ ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳು ಸಡಲಿಕೆ ಕೋರಿದ್ದಲ್ಲಿ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು (ಈ ಬಗ್ಗೆ ಸಡಿಲಿಕೆ ಕೋರಿದಲ್ಲಿ ಪ್ರಮಾಣಪತ್ರ ಸಲ್ಲಿಸಬೇಕು)
ವೇತನಶ್ರೇಣಿ:
ಪ್ರೋಸೆಸ್ ಜಾರಿಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಪ್ರತಿ ತಿಂಗಳಿಗೆ ರೂ 19950/- ದಿಂದ 37900/- ರೂಗಳ ವೇತನವನ್ನು ಪಡೆಯುವರು.
ಅರ್ಜಿ ಶುಲ್ಕ:
ಪ್ರೋಸೆಸ್ ಜಾರಿಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಿದೆ.
1) ಸಾಮಾನ್ಯ ಅಭ್ಯರ್ಥಿಗಳು 200/- ರೂ
2) ಪ್ರವರ್ಗ 2ಎ, 2ಬಿ ಮತ್ತು 3ಎ, 3ಬಿಗೆ ಸೇರಿದ ಅಭ್ಯರ್ಥಿಗಳು 100/-
3) ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸುವುದರಿಂದ ವಿನಾಯಿತಿ ನೀಡಲಾಗಿದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:: 23 ನವೆಂಬರ್ 2021
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:: 30 ನವೆಂಬರ್ 2021
Website |
Notification PDF |
Apply Online |