ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
Shivamogga District Court Recruitment 2021 : Apply Online for 17 Stenographer, Typist, Typist Copyist Jobs
- ಹುದ್ದೆ: ಶೀಘ್ರಲಿಪಿಗಾರರು, ಬೆರಳಚ್ಚುಗಾರರು ಹಾಗೂ ಬೆರಳಚ್ಚು ನಕಲುಗಾರರು
ಉದ್ಯೋಗ ಸ್ಥಳ: ಶಿವಮೊಗ್ಗ
- ಹುದ್ದೆಗಳ ಸಂಖ್ಯೆ:17
- ಶೀಘ್ರಲಿಪಿಗಾರರು 04
ವೇತನಶ್ರೇಣಿ: ರೂ.27,650-52,650 - ಬೆರಳಚ್ಚುಗಾರರು: 09
ವೇತನಶ್ರೇಣಿ: ರೂ. 21,400-42,000 - ಬೆರಳಚ್ಚು ನಕಲುಗಾರರು: 04
ವೇತನಶ್ರೇಣಿ: ರೂ.21,400-42,000
ಶೈಕ್ಷಣಿಕ ಅರ್ಹತೆ :
ಶೀಘ್ರಲಿಪಿಗಾರರು, ಬೆರಳಚ್ಚುಗಾರರು ಹುದ್ದೆಗೆ ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಮೂರು ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರ್ಯಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಹಾಗೂ
ಶೀಘ್ರಲಿಪಿಗಾರರು ಹುದ್ದೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಶೀಘ್ರಲಿಪಿ ಮತ್ತು ಬೆರಳಚ್ಚು ಹಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರ್ಯಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.
ಬೆರಳಚ್ಚುಗಾರರು ಹುದ್ದೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಹಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರ್ಯಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.
ಬೆರಳಚ್ಚು ನಕಲುಗಾರರು ಹುದ್ದೆಗೆ ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಕಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು
ವಯೋಮಿತಿ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ಆಯ್ಕೆ ವಿಧಾನ : ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 200
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 100
ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 27, 2021
ಅರ್ಜಿ ಸಲ್ಲಿಸಲು, ಆನ್‌ಲೈನ್ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜನವರಿ 30, 2022
ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜನವರಿ 31, 2022
(ಶೀಘ್ರಲಿಪಿಗಾರ) ಅಧಿಸೂಚನೆ : Click Here
(ಬೆರಳಚ್ಚುಗಾರ) ಅಧಿಸೂಚನೆ : Click Here
(ಬೆರಳಚ್ಚು ನಕಲುಗಾರ) ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here (ಡಿಸೆಂಬರ್ 27 ರಿಂದ ಅರ್ಜಿ ಸಲ್ಲಿಕೆ ಆರಂಭ)