ಶಿವಮೊಗ್ಗ ಗ್ರಾಮ ಪಂಚಾಯಿತಿ ನೇರ ನೇಮಕಾತಿ ಅಧಿಸೂಚನೆ 2022
Shivamogga Gram Panchayat Recruitment 2022: ಜಿಲ್ಲೆಯ ವಿವಿಧ ತಾಲೂಕುಗಳ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿನ ಗ್ರಂಥಾಲಯಗಳ ಮೇಲ್ವಿಚಾರಕರ ಹುದ್ದೆಗಳಿಗೆ ಗೌರವ ಸಂಭಾವನೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಸ್ಥಳೀಯ ಎಸ್.ಎಸ್.ಎಲ್.ಸಿ. ಪಾಸಾಗಿರುವ ನಿವಾಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಶಿವಮೊಗ್ಗ ಗ್ರಾಮ ಪಂಚಾಯಿತಿ |
ಹುದ್ದೆಗಳ ಹೆಸರು: | ಗ್ರಂಥಾಲಯಗಳ ಮೇಲ್ವಿಚಾರಕ |
ಜಿಲ್ಲೆಯ ವಿವಿಧ ತಾಲೂಕುಗಳ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿನ ಗ್ರಂಥಾಲಯಗಳ ಮೇಲ್ವಿಚಾರಕರ ಹುದ್ದೆಗಳಿಗೆ ಗೌರವ ಸಂಭಾವನೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಸ್ಥಳೀಯ ಎಸ್.ಎಸ್.ಎಲ್.ಸಿ. ಪಾಸಾಗಿರುವ ನಿವಾಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ:
ಎಸ್.ಎಸ್.ಎಲ್.ಸಿ. ಪಾಸಾಗಿರುವ ನಿವಾಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
ಶಿಕಾರಿಪುರ ತಾಲೂಕು ಚಿಕ್ಕಜಂಬೂರು ಮತ್ತು ಹೊಸೂರು, ಶಿವಮೊಗ್ಗ ತಾಲೂಕು ಅಬ್ಬಲಗೆರೆ, ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಿಗೆ ಮೇಲ್ವಿಚಾರಕರನ್ನು ನೇಮಿಸಿಕೊಳ್ಳುತ್ತಿದೆ.
ನಿಗಧಿತ ನಮೂನೆ ಅರ್ಜಿಗಳನ್ನು ಆಯಾ ಗ್ರಾ.ಪಂ.ಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ದಿ: 14/07/2022 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕ ಸಿ.ಜೆ.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಆಯಾ ಗ್ರಾಮ ಪಂಚಾಯತಿ, ಜಿ.ಕೇ.ಗ್ರಂ.ದ ಉಪನಿರ್ದೇಶಕರ ಕಚೇರಿ ದೂ.ಸಂ.: 08182-222905 ನ್ನು ಸಂಪರ್ಕಿಸುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 14/07/2022 |