ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಶಾಲಾ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಉಚಿತ ‘ಸ್ಮಾರ್ಟ್ ಫೋನ್’ ವಿತರಣೆ..!

ಮೈಸೂರು: ಸರ್ಕಾರಿ ಶಾಲಾ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಶಾಲಾ ಮಕ್ಕಳಿಗೆ ಉಚಿತ ‘ಸ್ಮಾರ್ಟ್ ಫೋನ್’ ವಿತರಣೆ ನೀಡುವ ಕುರಿತು ಚಿಂತನೆ ನಡೆದಿದೆ ಎಂದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊರೊನಾ ಹಿನ್ನೆಲೆ ಮಕ್ಕಳಿಗೆ ಭೌತಿಕ ತರಗತಿ ನಡೆಸಲು ಸಾಧ್ಯವಾಗಲಿಲ್ಲ, ಕೇವಲ ಆನ್ಲೈನ್ ಕ್ಲಾಸ್ ಗಳು ನಡೆದಿವೆ. ಇನ್ನೂ, ಮುಂದಿನ ಶೈಕ್ಷಣಿಕ ವರ್ಷ ಹೇಗಿರುತ್ತದೆ ಎನ್ನುವುದನ್ನು ಈಗಲೇ ಹೇಳಲಾಗುವುದಿಲ್ಲ. ಆದ್ದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಯ ಬಡ ಮಕ್ಕಳಿಗೆ ಅನುಕೂಲವಾಗುವಂತೆ ಉಚಿತವಾಗಿ ಸ್ಮಾರ್ಟ್ ಫೋನ್ ಒದಗಿಸುವ ಚಿಂತನೆ ನಡೆದಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಆನ್ಲೈನ್ ಕ್ಲಾಸ್ ನಿಂದ ಯಾವ ಮಕ್ಕಳು ಕೂಡ ವಂಚಿತರಾಗಬಾರದು. , ಮಕ್ಕಳಿಗೆ ಸ್ಮಾರ್ಟ್ ಫೋನ್ ನೀಡಲು ಸಂಘ, ಸಂಸ್ಥೆಗಳ ನೆರವು ಪಡೆಯುವ ಚಿಂತನೆ ಇದೆ, ಸರ್ಕಾರ ಈ ಬಗ್ಗೆ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಿದೆ. ಬಡ ಮಕ್ಕಳ ನೆರವಿಗೆ ಸರ್ಕಾರ ಧಾವಿಸಲಿದೆ. ಯಾವೊಬ್ಬ ಮಗು ಕೂಡ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಸುರೇಶ್ ಕುಮಾರ್ ಹೇಳಿದರು.

close button