ಸಿಬ್ಬಂದಿ ನೇಮಕಾತಿ ಆಯೋಗದಿಂದ ಗ್ರೂಪ್ ಬಿ’ ಸಿ’ ಹುದ್ದೆಗಳ ಬೃಹತ್ ನೇಮಕಾತಿ 2022
ಸಿಬ್ಬಂದಿ ನೇಮಕಾತಿ ಆಯೋಗವು ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಪರೀಕ್ಷೆ 2021ರ ಅಧಿಸೂಚನೆ ಹೊರಡಿಸಿದೆ. ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳ ನೇಮಕಾತಿಗಾಗಿ ಈ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 23,2021 ರಿಂದ ಜನವರಿ 23,2022ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
ವಿದ್ಯಾರ್ಹತೆ :
ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಉದ್ಯೋಗ ಸುದ್ದಿ: ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ನೇಮಕಾತಿ ಅಧಿಸೂಚನೆ 2022
ವಯೋಮಿತಿ :
ಜನವರಿ 1,2022ರ ಅನ್ವಯ ಹುದ್ದೆಗಳಿಗನುಸಾರ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಆಭ್ಯರ್ಥಿಗಳು ಅರ್ಜಿ ಹಾಕಬಹುದು.
ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ,
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ,
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ :
ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500/- ರಿಂದ 1,51,000/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಟಯರ್ I , ಟಯರ್ II , ಟಯರ್ III ಮತ್ತು ಟಯರ್ IV ಪರೀಕ್ಷೆಗಳ ಮೂಲಕ ಮತ್ತು ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಜನವರಿ 23,2022ರ ರಾತ್ರಿ 11:30ರೊಳಗೆ ಮತ್ತು ಆಫ್‌ಲೈನ್ ಮೂಲಕ ಜನವರಿ 25,2022ರೊಳಗೆ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಮಹಿಳಾ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : ಡಿಸೆಂಬರ್ 23,2021
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : ಜನವರಿ 23,2022ರ ರಾತ್ರಿ 11:30
ಆನ್‌ಲೈನ್ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜನವರಿ 25,2022ರ ರಾತ್ರಿ 11:30
ಆಫ್‌ಲೈನ್ ಚಲನ್ ಜನರೇಟ್ ಆಗಲು ಕೊನೆಯ ದಿನಾಂಕ : ಜನವರಿ 26,2022ರ ರಾತ್ರಿ 11:30
ಅರ್ಜಿ ಶುಲ್ಕ ಚಲನ್ ಮೂಲಕ ಪಾವತಿಸಲು ಕೊನೆಯ ದಿನಾಂಕ : ಜನವರಿ 27,2022
ಅರ್ಜಿಯನ್ನು ವಿತ್‌ಡ್ರಾ ಮಾಡುವ ದಿನಾಂಕ : ಜನವರಿ 28,2022 ರಿಂದ ಫೆಬ್ರವರಿ 1,2022
ಟಯರ್ ಪರೀಕ್ಷೆ ದಿನಾಂಕ : ಏಪ್ರಿಲ್ 2022
ಉದ್ಯೋಗ ಸುದ್ದಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಬೃಹತ್ ನೇಮಕಾತಿ ಅಧಿಸೂಚನೆ 2022
ಅರ್ಜಿ ಸಲ್ಲಿಕೆ :
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://ssc.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 23,2022ರ ರಾತ್ರಿ 11:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ತಿದ್ದುಪಡಿಗೆ ಜನವರಿ 28,2022 ರಿಂದ ಫೆಬ್ರವರಿ 1,2022ರ ವರೆಗೆ ಅವಕಾಶ ನೀಡಲಾಗಿರುತ್ತದೆ.
Website |
Notification PDF |
Apply Online |