10th ಪಾಸಾದವರಿಗೆ ಭರ್ಜರಿ ಉದ್ಯೋಗಾವಕಾಶ: 45285 ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ
ಸ್ಟಾಫ್ ಸೆಲೆಕ್ಷನ್ ಕಮಿಷನ್ ಭರ್ಜರಿ ಉದ್ಯೋಗ ಆಫರ್ ನೀಡಿದೆ. ಎಸ್ಎಸ್ಎಲ್ಸಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಬರೋಬರಿ 24,369 ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಸ್ಟಾಫ್ ಸೆಲೆಕ್ಷನ್ ಕಮಿಷನ್ |
ಹುದ್ದೆಗಳ ಹೆಸರು: | ಕಾನ್ಸ್ಟೇಬಲ್ |
ಒಟ್ಟು ಹುದ್ದೆಗಳು | 45,284 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಅಥವಾ ತತ್ಸಮಾನ ಉತ್ತೀರ್ಣ.
ವಯೋಮಿತಿ:
ಕನಿಷ್ಠ ವಯಸ್ಸು: 18 ವರ್ಷ.
ಗರಿಷ್ಠ ವಯೋಮಿತಿ: 23 ವರ್ಷ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ ನೀಡಲಾಗಿದೆ.
ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,700 ರಿಂದ ರೂ. 69,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ
ಅರ್ಜಿ ಶುಲ್ಕ:
ಸಾಮಾನ್ಯ / ಒಬಿಸಿ ಅಭ್ಯರ್ಥಿಗಳಿಗೆ ರೂ.100.
ಎಸ್ಸಿ, ಎಸ್ಟಿ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅಪ್ಲಿಕೇಶನ್ ಶುಲ್ಕವನ್ನು ನೆಟ್ಬ್ಯಾಂಕಿಂಗ್, ಎಸ್ಬಿಐ ಚಲನ್, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಮೂಲಕ ಪಾವತಿಸಬಹುದು.
ಆಯ್ಕೆ ವಿಧಾನ:
ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು
ಅಪ್ಲಿಕೇಶನ್ ಸಲ್ಲಿಸಲು ಆರಂಭಿಕ ದಿನಾಂಕ : 27-10-2022
ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನಾಂಕ : 30-11-2022 ರ ರಾತ್ರಿ 11 ಗಂಟೆವರೆಗೆ.
ಆನ್ಲೈನ್ ಮೂಲಕ ಅಪ್ಲಿಕೇಶನ್ ಶುಲ್ಕ ಪಾವತಿಸಲು ಕೊನೆ ದಿನಾಂಕ : 01-12-2022 ರ ರಾತ್ರಿ 11 ಗಂಟೆವರೆಗೆ.
ಚಲನ್ ಮೂಲಕ ಅಪ್ಲಿಕೇಶನ್ ಶುಲ್ಕ ಪಾವತಿಸಲು ಕೊನೆ ದಿನಾಂಕ : 30-11-2022
ಟೈಯರ್-1 ಸಿಬಿಟಿ ಪರೀಕ್ಷೆ ದಿನಾಂಕ: ಜನವರಿ 2023
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 27-10-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-11-2022 ರ ರಾತ್ರಿ 11 ಗಂಟೆವರೆಗೆ. |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |