ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ವಾಹನ ಖರೀದಿಗೆ ಪಡೆಯಿರಿ ರೂ 4 ಲಕ್ಷ ಸಬ್ಸಿಡಿ – Swavalambi Sarathi Karnataka Online Application 2023

ವಾಹನ ಖರೀದಿಗೆ ಪಡೆಯಿರಿ 4 ಲಕ್ಷದ ವರೆಗೆ ಸಬ್ಸಿಡಿ 

Swavalambi Sarathi Karnataka Online Application 2023 Apply Online: – ನೀವು ಸ್ವಂತಃ ವಾಹನ ಖರೀದಿಗೆ ಯೋಚಿಸುತ್ತಿದ್ದೀರಾ? ನೀವು ಕರ್ನಾಟಕ ಸರ್ಕಾರ ನೀಡುವ 4 ಲಕ್ಷ ರೂ. ಸಬ್ಸಿಡಿ ಸದುಪಯೋಗ ಪಡೆದುಕೊಳ್ಳಬೇಕಾ? ಹಾಗಿದ್ದಲ್ಲಿ ಸ್ವಾವಲಂಬಿ ಸಾರಥಿ ಯೋಜನೆಯ ಕುರಿತು ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.

ರಾಜ್ಯ ಸರ್ಕಾರದ ವಿವಿಧ ನಿಗಮಗಳ ಮೂಲಕ ವಿವಿಧ ಸಮೂದಾಯಗಳ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ರೂಪಿಸಲಾಗಿರುತ್ತದೆ. ಅದರಂತೆ ಸ್ವಾವಲಂಬಿ ಸಾರಥಿ ಯೋಜನೆಯು ಅದರಲ್ಲಿ ಒಂದು.

ಯೋಜನೆಯ ಹೆಸರು: ಸ್ವಾವಲಂಬಿ ಸಾರಥಿ ಯೋಜನೆ
ಸಹಾಯಧನ ಮೊತ್ತ: ವಾಹನದ ಮೌಲ್ಯದ ಶೇ 75 ರಷ್ಟು ಅಥವಾ ಗರಿಷ್ಠ ರೂ. 4 ಲಕ್ಷದ ವರೆಗೆ
ಅರ್ಜಿದಾರರ ವಯಸ್ಸು: 18 ರಿಂದ 55 ವರ್ಷ

ಸ್ವಾವಲಂಬಿ ಸಾರಥಿ: ಸರಕು ವಾಹನ/ಬ್ಯಾಕ್ಸಿ ಹಳದಿ ಬೋರ್ಡ್‌ ವಾಹನದ ವೆಚ್ಚದ ಶೇ.75 ರಷ್ಟು ಸಹಾಯಧನ ಗರಿಷ್ಟ ರೂ.4 ಲಕ್ಷ

ಈ ಯೋಜನೆಯಡಿ ಬ್ಯಾಂಕುಗಳಿಂದ ಮಂಜೂರಾತಿ ನೀಡಿದ / ಪಡೆದ ಟ್ಯಾಕ್ಸಿ /ಸರಕು ವಾಹನಗಳನ್ನು ಖರೀದಿಸಲು ಪ್ರತಿ ಫಲಾನುಭವಿಗೆ ವಾಹನದ ಮೌಲ್ಯದ ಶೇ 50 ರಷ್ಟು ಅಥವಾ ಗರಿಷ್ಠ ರೂ. 3,00,000/- ರ ವರೆಗೆ, ಪ್ರಯಾಣಿಕ ಆಟೋ ರಿಕ್ಷಾ ಖರೀದಿಸಲು ಗರಿಷ್ಠ ರೂ. 75,000/- ಸಹಾಯಧನ ನೀಡಲಾಗುತ್ತದೆ. ವಾಹನದ ಉಳಿದ ಮೊತ್ತಕ್ಕೆ ಬ್ಯಾಂಕ್ ಸಾಲ ಪಡೆದುಕೊಂಡ ಬಗ್ಗೆ ಬ್ಯಾಂಕ್ ಪತ್ರವನ್ನು ಸಲ್ಲಿಸಬೇಕು.

ಅರ್ಜಿದಾರರು ಈ ಕೆಳಗಿನ ಎಲ್ಲಾ ಅರ್ಹತೆಗಳಿಗೆ ಬದ್ಧರಾಗಿದ್ದರೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ;
– ಕರ್ನಾಟಕ ರಾಜ್ಯದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಸೇರಿದವರಾಗಿರಬೇಕು.
– ಕರ್ನಾಟಕದ ಶಾಶ್ವತ ನಿವಾಸಿಯಾಗಿರಬೇಕು.
– ವಯಸ್ಸು 21 ರಿಂದ 45 ವರ್ಷಗಳ ನಡುವೆ ಇರಬೇಕು.
– ಎಲ್ಲಾ ಮೂಲಗಳಿಂದ ಬರುವ ವಾರ್ಷಿಕ ಕುಟುಂಬದ ಆದಾಯವು ರೂ. 4,50,000/- ಕ್ಕಿಂತ ಕಡಿಮೆ ಇರಬೇಕು.
– ಪ್ರಾದೇಶಿಕ ಸಾರಿಗೆ ಅಧಿಕಾರಿಯಿಂದ ನೀಡಲಾದ ಚಾಲನಾ ಪರವಾನಗಿ ಹೊಂದಿರಬೇಕು
– ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ ಉದ್ಯೋಗಿಯಾಗಬಾರದು.
– ಕಳೆದ 05 ವರ್ಷಗಳಲ್ಲಿ ಅರ್ಜಿದಾರ ಅಥವಾ ಅವನ/ಅವಳ ಕುಟುಂಬದ ಸದಸ್ಯರು ಸರ್ಕಾರದ / ನಿಗಮದ ಯಾವುದೇ ಇತರ ಯೋಜನೆಯಡಿಯಲ್ಲಿ(ಅರಿವು ಯೋಜನೆ ಹೊರತುಪಡಿಸಿ) ಸಾಲ ಸೌಲಭ್ಯಗಳನ್ನು ಪಡೆದಿರಬಾರದು.

ಅರ್ಜಿದಾರರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಈ ಕೆಳಗಿನ ಎಲ್ಲಾ ಪ್ರಮುಖ ದಾಖಲೆಗಳನ್ನು ಹೊಂದಿರಬೇಕು.
ಅರ್ಜಿದಾರರ ಫೋಟೋ
ಮೊಬೈಲ್ ನಂಬರ್
ಜಾತಿ/ಅಲ್ಪಸಂಖ್ಯಾತ ಪ್ರಮಾಣಪತ್ರ
ಆದಾಯ ಪ್ರಮಾಣಪತ್ರ
ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)
ವಾಹನ ಚಾಲನಾ ಪರವಾನಗಿ ಪ್ರತಿ
ಬ್ಯಾಂಕ್ ಪಾಸ್ ಬುಕ್
ವಾಹನದ ಅಂದಾಜು ದರಪಟ್ಟಿ
ಸ್ವಯಂ ಘೋಷಣೆ ಪತ್ರ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ – ನವೆಂಬರ್ 29, 2023
ಡಾ: ಬಿ. ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ ನವೆಂಬರ್ 29, 2023

ವೆಬ್ಸೈಟ್ ಲಿಂಕ್ – ಇಲ್ಲಿ ಕ್ಲಿಕ್ ಮಾಡಿ 
close button