ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

SSLC ಪಾಸಾದವರಿಗೆ ಗ್ರಾಮ ಪಂಚಾಯತ್ ನಲ್ಲಿ ಖಾಲಿ ಹುದ್ದೆಗಳ ಭರ್ತಿ 2022 | District Gram Panchayat Recruitment 2022

ತುಮಕೂರು ಜಿಲ್ಲೆಯ ಗ್ರಾಮ ಪಂಚಾಯತ ನೇಮಕಾತಿ  2022

Tumkur District Gram Panchayat Recruitment 2022 : ತುಮಕೂರು ಜಿಲ್ಲೆಯ ಗ್ರಾಮ ಪಂಚಾಯತ ಗ್ರಂಥಾಲಯಗಳಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು:ತುಮಕೂರು ಜಿಲ್ಲೆಯ ಗ್ರಾಮ ಪಂಚಾಯತ
ಹುದ್ದೆಗಳ ಹೆಸರು:ಗ್ರಂಥಾಲಯ ಮೇಲ್ವಿಚಾರಕರು
ಒಟ್ಟು ಹುದ್ದೆಗಳು 19
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 

 

ವಿದ್ಯಾರ್ಹತೆ:
ತುಮಕೂರು ಜಿಲ್ಲೆಯ ಗ್ರಾಮ ಪಂಚಾಯತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:
ತುಮಕೂರು ಜಿಲ್ಲೆಯ ಗ್ರಾಮ ಪಂಚಾಯತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ  ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು 18 ವರ್ಷ ವಯಸ್ಸನ್ನು ಪೂರೈಸಿರಬೇಕು ಹಾಗೂ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 36 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

ಉದ್ಯೋಗ ಸುದ್ದಿ: ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಹುದ್ದೆಗಳು 

ವೇತನಶ್ರೇಣಿ:
ತುಮಕೂರು ಜಿಲ್ಲೆಯ ಗ್ರಾಮ ಪಂಚಾಯತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 12,000 ಗೌರವ ಸಂಭಾವನೆ ನೀಡಲಾಗುವುದು.

 

 

ಅರ್ಜಿ ಶುಲ್ಕ:
ತುಮಕೂರು ಜಿಲ್ಲೆಯ ಗ್ರಾಮ ಪಂಚಾಯತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ? :
• ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು  ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ತುಮಕೂರು ಜಿಲ್ಲಾ ಪಂಚಾಯತ್ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

 ಲಗತ್ತಿಸಬೇಕಾದ ದಾಖಲೆಗಳು :
• ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಂಕಪಟ್ಟಿ
• ಅಭ್ಯರ್ಥಿಗಳು ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು ಮತ್ತು ತಾಲ್ಲೂಕು ತಹಶೀಲ್ದಾರ್ ರವರಿಂದ ಪಡೆದ ದೃಢೀಕೃತ ವಾಸಸ್ಥಳ ಪ್ರಮಾಣ ಪತ್ರ ಸಲ್ಲಿಸಬೇಕು.
• ಕನ್ನಡ ಮಾಧ್ಯಮ ಅಭ್ಯರ್ಥಿ ಮೀಸಲಾತಿ ಪ್ರಮಾಣ ಪತ್ರ.
• ಚುನಾವಣಾ ಗುರುತಿನ ಚೀಟಿ
• ಜಾತಿ ಪ್ರಮಾಣ ಪತ್ರ
• ಯಾವುದೇ ಮೀಸಲಾತಿಯನ್ನು/ಸಡಿಲಿಕೆಯನ್ನು ಒಳಪಡುವ ಅಭ್ಯರ್ಥಿಗಳು ಸಂಬಂಧಿಸಿದ ಇಲಾಖೆಯಿಂದ ದೃಢೀಕೃತ ಪ್ರಮಾಣ ಪತ್ರ ಸಲ್ಲಿಸತಕ್ಕದ್ದು.

ಉದ್ಯೋಗ ಸ್ಥಳ : ತುಮಕೂರು ಜಿಲ್ಲೆಯ ಅಂಕಸಂದ್ರ, ಬಾಗೇನಹಳ್ಳಿ, ಬೇವಿನಹಳ್ಳಿ, ಭೈರನಾಯಕನಹಳ್ಳಿ, ಚೆನ್ನಕೇಶವಪುರ, ದಂಡಿನಶಿವರ, ಗರಣಿ, ಹುಳಿಯಾರು, ಕೆಂಕೆರೆ, ಕೊಡಗೆಹಳ್ಳಿ, ಮುದ್ದೇನಹಳ್ಳಿ, ನಡೆಮಾವಿನಪುರ, ನಾದೂರು, ನಲ್ಲಿಗಾನಹಳ್ಳಿ, ನಿಡವಳಲು, ನೊಣವಿನಕೆರೆ, ಸಿದ್ದಾಪುರ, ವಳ್ಳೂರು, ವಡ್ಡಗೆರೆ ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ಹುದ್ದೆ ಖಾಲಿ ಇದೆ.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಫೆಬ್ರುವರಿ 16, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 14, 2022
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  / ಅರ್ಜಿ ಫಾರ್ಮ್ Click Here 

close button