Tumkur Zilla Panchayat Recruitment 2022: ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ತುಮಕೂರು ಜಿಲ್ಲಾ ಪಂಚಾಯತ್ |
ಹುದ್ದೆಗಳ ಹೆಸರು: | ಆಡಳಿತ ಸಹಾಯಕರು, ಲೆಕ್ಕ ಸಹಾಯಕರು, ಬಹುಸಹಾಯಕ ಕೆಲಸಗಾರ |
ಒಟ್ಟು ಹುದ್ದೆಗಳು | 5 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಆಡಳಿತ ಸಹಾಯಕ 01 ಹುದ್ದೆ ಲೆಕ್ಕ ಸಹಾಯಕ 01 ಹುದ್ದೆ ಬಹುಸಹಾಯಕ ಕೆಲಸಗಾರ 03 ಹುದ್ದೆ |
ವಿದ್ಯಾರ್ಹತೆ |
ಆಡಳಿತ ಸಹಾಯಕರು ಹುದ್ದೆಗೆ ಯಾವುದೇ ವಿಷಯದಲ್ಲಿ ಪದವಿ ಹೊಂದಿರಬೇಕು. ಇಂಗ್ಲೀಷ್ ಮತ್ತು ಕನ್ನಡ ಭಾಷೆಯಲ್ಲಿ ಟೈಪಿಂಗ್ ಮಾಡುವ ಜ್ಞಾನ ಮತ್ತು ಕೌಶಲ್ಯ ಇರಬೇಕು. ಕನಿಷ್ಠ 3 ವರ್ಷಗಳು ಸರ್ಕಾರ ಅಥವಾ ಇತರೆ ಯಾವುದೇ ಸಾರ್ವಜನಿಕ ಸಂಸ್ಥೆಗಳಲ್ಲಿ ಕೆಲಸ ಮಾಡಿರುವ ಅನುಭವ ಹೊಂದಿರಬೇಕು. |
ಲೆಕ್ಕ ಸಹಾಯಕ ಹುದ್ದೆಗೆ ಬಿ.ಕಾಂ. ಪದವಿ ಹೊಂದಿರಬೇಕು. ಇಂಗ್ಲೀಷ್ ಮತ್ತು ಕನ್ನಡ ಭಾಷೆಯಲ್ಲಿ ಟೈಪಿಂಗ್ ಮಾಡುವ ಜ್ಞಾನ ಮತ್ತು ಕೌಶಲ್ಯ ಇರಬೇಕು. ಕನಿಷ್ಠ 3 ವರ್ಷಗಳು ಸರ್ಕಾರ ಅಥವಾ ಇತರೆ ಯಾವುದೇ ಸಾರ್ವಜನಿಕ ಸಂಸ್ಥೆಗಳಲ್ಲಿ ಟ್ಯಾಲಿ ತಂತ್ರಾಂಶ ಬಳಸಿ ಕೆಲಸ ಮಾಡಿರುವ ಅನುಭವ ಹೊಂದಿರಬೇಕು. |
ಬಹುಸಹಾಯಕ ಕೆಲಸಗಾರ ಹುದ್ದೆಗೆ ಕನಿಷ್ಠ 10ನೇ ತರಗತಿ ಪೂರ್ಣಗೊಂಡಿರಬೇಕು. ಕನಿಷ್ಠ 3 ವರ್ಷಗಳ ಸರ್ಕಾರ ಅಥವಾ ಇತರೆ ಯಾವುದೇ ಸಾರ್ವಜನಿಕ ಸಂಸ್ಥೆಗಳಲ್ಲಿ ಕೆಲಸ ಮಾಡಿರುವ ಅನುಭವ ಹೊಂದಿರಬೇಕು. |
ವಯೋಮಿತಿ:
ಅಭ್ಯರ್ಥಿಯು ಅರ್ಜಿ ಸಲ್ಲಿಸಲು ಗರಿಷ್ಠ 45 ವರ್ಷದೊಳಗಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ದಿನಾಂಕ ಜೂನ್ 21, 2022 ಕ್ಕೆ 45 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:
ನಿಗದಿಪಡಿಸಿದ ವಿದ್ಯಾರ್ಹತೆಗೆ ಅನುಗುಣವಾಗಿ ಮೆರಿಟ್ ಪಟ್ಟಿ ತಯಾರಿಸಿ, ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಸರ್ಕಾರ ನಿಗದಿಪಡಿಸಿರುವ ವಿದ್ಯಾರ್ಹತೆ ಹಾಗೂ ಅನುಭವದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಜೂನ್ 15, 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಜೂನ್ 21, 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |