10ನೇ ಪಿಯುಸಿ ಪಾಸಾದವರಿಗೆ ವಿವಿಧ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಅಹ್ವಾನ

Udupi District Court Recruitment 2022 : ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಬೆರಳಚ್ಚು ನಕಲುಗಾರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು: 3
ಅರ್ಜಿ ಸಲ್ಲಿಸುವ ಬಗೆ: ಆನ್ಲೈನ್ 

ವಿದ್ಯಾರ್ಹತೆ:
ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ಅಥವಾ
ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟೇರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಕಿರಿಯ ದರ್ಜೆಯ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ನಿಗದಿತ ಅರ್ಜಿ ಶುಲ್ಕದ ವಿವರ :
 ಸಾಮಾನ್ಯ ವರ್ಗ, ಪ್ರವರ್ಗ 1, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 200
ಎಸ್ಸಿ, ಎಸ್ಟಿ, ಅಂಗವಿಕಲ ಅಭ್ಯರ್ಥಿಗಳು ರೂ. 100

ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಆಯ್ಕೆ ವಿಧಾನ:
ಶೈಕ್ಷಣಿಕ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನದಲ್ಲಿ ಕೊಡುವ ವಿಷಯವನ್ನು ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅರ್ಹತಾ ಪರೀಕ್ಷೆಯಲ್ಲಿ ಬೆರಳಚ್ಚು ಯಂತ್ರ/ ಕಂಪ್ಯೂಟರ್ ನಲ್ಲಿ ಬೆರಳಚ್ಚು ಮಾಡಿಸಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಆಗಸ್ಟ್ 22, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಸೆಪ್ಟೆಂಬರ್ 26, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 28, 2022

ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
error: Content is protected !!