ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಜಿಲ್ಲಾ ನ್ಯಾಯಾಲಯದಲ್ಲಿ ಹೊಸ ನೇಮಕಾತಿ ಅಧಿಸೂಚನೆ 2022 । District Court Recruitment 2022

ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಹೊಸ ನೇಮಕಾತಿ ಅಧಿಸೂಚನೆ 2022

Uttara Kannada District Court Recruitment 2022:ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು:ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯ
ಹುದ್ದೆಗಳ ಹೆಸರು: ಶೀಘ್ರಲಿಪಿಗಾರರು ಗ್ರೇಡ್ 3 ಹಾಗೂ ಜವಾನ
ಒಟ್ಟು ಹುದ್ದೆಗಳು 19
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

 

ವಿದ್ಯಾರ್ಹತೆ:

ಶೀಘ್ರಲಿಪಿಗಾರರು – ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು (2 ವರ್ಷ) & ಶೀಘ್ರಲಿಪಿ ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರ್ಯಾಕ್ಟಿಸ್ (5 ಮತ್ತು 6ನೇ ಸೆಮಿಸ್ಟರ್)/ಸೆಕ್ರೆಟರಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಜವಾನ – 10ನೇ ತರಗತಿಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕನ್ನಡ ಓದಲು, ಬರೆಯಲು ತಿಳಿದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

 

 

ವೇತನಶ್ರೇಣಿ:
ಜಿಲ್ಲಾ ನ್ಯಾಯಾಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ
ಶೀಘ್ರಲಿಪಿಗಾರರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ  ರೂ. 27650/- ರೂ.52650/-
ಜವಾನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ  ರೂ.17000-28950

ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 300
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 200
ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು ರೂ. 100

(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.)

ಆಯ್ಕೆ ವಿಧಾನ 
ಶೀಘ್ರಲಿಪಿಗಾರ – ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 5 ಅಭ್ಯರ್ಥಿಗಳಂತೆ ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು
ಜವಾನ – ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 10 ಅಭ್ಯರ್ಥಿಗಳಂತೆ ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಮೇ 02, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 01, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕಜೂನ್ 02, 2022
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ( ಜವಾನ )ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ( ಶೀಘ್ರಲಿಪಿಗಾರ )ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

 

close button