ಗ್ರಾಮ ಪಂಚಾಯಿತಿ ನೇಮಕಾತಿ : SSLC ಪಾಸಾದವರಿಗೆ ಅರ್ಜಿ ಅಹ್ವಾನ

ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ ಗ್ರಂಥಾಲಯಗಳಲ್ಲಿ ಖಾಲಿ ಇರುವ ಹುದ್ದೆಯ ಭರ್ತಿ

Uttara Kannada Gram Panchayat Recruitment 2022: ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ ಗ್ರಂಥಾಲಯಗಳಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ
ಹುದ್ದೆಗಳ ಹೆಸರು: ಗ್ರಂಥಾಲಯ ಮೇಲ್ವಿಚಾರಕರು
ಒಟ್ಟು ಹುದ್ದೆಗಳು  05
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಗ್ರಾಮ ಪಂಚಾಯತಿ ನೇಮಕಾತಿಯ ಗ್ರಂಥಾಲಯ ಮೇಲ್ವಿಚಾರಕ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆ /ಬೋರ್ಡ್​ನಿಂದ ಕಡ್ಡಾಯವಾಗಿ 10ನೇ ತರಗತಿ/SSLC ಪಾಸಾಗಿರಬೇಕು.

– ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು.
– ನಿಗದಿಪಡಿಸಿದ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸತಕ್ಕದ್ದು
– ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದಿದ್ದವರಿಗೆ ಆದ್ಯತೆ ನೀಡಲಾಗುವುದು.

ವಯೋಮಿತಿ:
ಅಭ್ಯರ್ಥಿಯು 18 ವರ್ಷ ವಯಸ್ಸನ್ನು ಪೂರೈಸಿರಬೇಕು ಹಾಗೂ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

ಅರ್ಜಿ ಸಲ್ಲಿಸುವ ವಿಧಾನ:
– ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
– ಅಭ್ಯರ್ಥಿಗಳು ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ:
ಜಿಲ್ಲೆಯ ಗ್ರಾಮ ಪಂಚಾಯತ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಜುಲೈ 09, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಆಗಸ್ಟ್ 05, 2022
   
error: Content is protected !!