ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಅರಣ್ಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಅಹ್ವಾನ 2021

ಉದ್ಯೋಗ ಮಾಹಿತಿ 

ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಉತ್ತರಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಈ ಕೆಳಕಂಡ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.

 ಹುದ್ದೆಗಳ ವಿವರ 
BE- Civil – 02
Bsc / Msc – 01 (ತೋಟಗಾರಿಕೆ) ಮತ್ತು
Bsc / Msc -01 (ಅರಣ್ಯ ತಾಂತ್ರಿಕ ಸಹಾಯಕರು)

ಉದ್ಯೋಗ ಸ್ಥಳ: ಉತ್ತರಕನ್ನಡ ಜಿಲ್ಲಾ
ಒಟ್ಟು ಹುದ್ದೆಗಳು: 4

ಈ ಮೇಲೆ ತಿಳಿಸಿದ ಹುದ್ದೆಗಳ ಅವಶ್ಯಕತೆ ಇದ್ದು, ಹುದ್ದೆಗೆ ಆಸಕ್ತಿಯಿರುವ ಅಭ್ಯರ್ಥಿಗಳು ದಿನಾಂಕ : 25-03-2021 ರಿಂದ 29-03-2021 ರೊಳಗಾಗಿ ಅರ್ಜಿಗಳನ್ನು ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಸಲ್ಲಿಸಬಹುದಾಗಿರುತ್ತದೆ. ಅಪೂರ್ಣಗೊಂಡಿರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಅರ್ಹತೆಗಳು
1) BE-Civil ವಿದ್ಯಾರ್ಹತೆ
2) Bsc/Msc ತೋಟಗಾರಿಕೆ ವಿದ್ಯಾರ್ಹತೆ
3) Bsc/Msc ಅರಣ್ಯ ವಿದ್ಯಾರ್ಹತೆ
4) ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಕನ್ನಡ ಮತ್ತು ಇಂಗ್ಲಿಷ್ ಭಾಷೆ ತಿಳಿದಿರಬೇಕು.


ಸದರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ಸಂಭಾವನೆ ರೂ 24,000/- ಮತ್ತು ಪ್ರಯಾಣ ಭತ್ಯೆ ಪಾವತಿಸಲಾಗುವುದು.

ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ ಅಥವಾ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಕಾರ್ಯಾಲಯಕ್ಕೆ ನೇರ ಭೇಟಿ ನೀಡಿ ಮಾಹಿತಿ ಪಡೆಯಬಹುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25 ಮಾರ್ಚ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29 ಮಾರ್ಚ್ 2021

Website 

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

Scroll to Top