WhatsApp Telegram Group

ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಖಾಲಿ ಹುದ್ದೆಗಳು, District Court Recruitment 2021 Apply at District Court

ವಿಜಯಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಂಗ ಕಚೇರಿಯಲ್ಲಿ ಇಲ್ಲಿ ಖಾಲಿ ಇರುವ ಒಟ್ಟು 2 ಬೆರಳಚ್ಚು-ನಕಲುಗಾರ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ದಿನಾಂಕ ಮಾರ್ಚ್ 26,2021ರ ರಾತ್ರಿ 11:59 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು:  02

In Article ad

ಉದ್ಯೋಗ ಸ್ಥಳ: ವಿಜಯಪುರ

ವಿದ್ಯಾರ್ಹತೆ:
ಬೆರಳಚ್ಚು-ನಕಲುಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಎಸ್.‌ಎಸ್.‌ಎಲ್.‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
– ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಬೆರಳಚ್ಚು ಜೂನಿಯರ್ ಗ್ರೇಡ್ ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೊಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯಗಳನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು.

ವಯೋಮಿತಿ:
– ಮಾರ್ಚ್ 26,2021ರ ಅನ್ವಯ ಕನಿಷ್ಠ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
– ಪ್ರವರ್ಗ-2ಎ,2ಬಿ, 3ಎ,3ಬಿ ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ
– ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ
– ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.


In Article ad

ಅರ್ಜಿ ಶುಲ್ಕ:
– ಸಾಮಾನ್ಯ ವರ್ಗ, ಪ್ರವರ್ಗ- 2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ 200/-ರೂ
– ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 100/-ರೂ
* ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಟೇಟ್ ಬ್ಯಾಂಕ್ ಕಲೆಕ್ಟ್ ಮೂಲಕ ನೆಟ್ ಬ್ಯಾಂಕಿಂಗ್/ ಕ್ರೆಡಿಕ್ಟ್ ಕಾರ್ಡ್/ಡೆಬಿಟ್ ಕಾರ್ಡ್/ಚಲನ್ ಅನ್ನು ಡೌನ್ ಲೋಡ್ ಮಾಡುವ ಸೌಲಭ್ಯದ ಮೂಲಕ ಪಾವತಿ ಮಾಡಬಹುದಾಗಿದೆ. ಮಾರ್ಚ್ 30,2021ರೊಳಗೆ ಶುಲ್ಕವನ್ನು ಪಾವತಿಸತಕ್ಕದ್ದು.

ವೇತನ ಶ್ರೇಣಿ:
ವೇತನದ ವಿವರ: ಬೆರಳಚ್ಚು-ನಕಲುಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ 21400-500-22400-550-24600-600-27000-650-29600-750-32600-850-36000-950-39800-1100-42000/- ರೂ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುವುದು.

ಆಯ್ಕೆ ವಿಧಾನ:
ಬೆರಳಚ್ಚು-ನಕಲುಗಾರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಅಂಕಗಳ ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನದಲ್ಲಿ ಕೊಡುವ ವಿಷಯವನ್ನು ಬೆರಳಚ್ಚು ಯಂತ್ರ ಅಥವಾ ಕಂಪ್ಯೂಟರ್ ನಲ್ಲಿ ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಶೇಕಡಾವಾರು ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

In Article ad

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27 ಫೆಬ್ರುವರಿ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26 ಮಾರ್ಚ್ 2021
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 30 ಮಾರ್ಚ್ 2021

Website 
Notification 
Apply Online 

 

In Article ad

ಜಿಲ್ಲಾವಾರು ಉದ್ಯೋಗ ಮಾಹಿತಿ

close button