SDA ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ – ಜಲಸಂಪನ್ಮೂಲ ಇಲಾಖೆ ಕರ್ನಾಟಕ
ಜಲಸಂಪನ್ಮೂಲ ಇಲಾಖೆ ಕರ್ನಾಟಕ ದಲ್ಲಿ ಅಗತ್ಯವಿರುವ 155 ಸೆಕೆಂಡ್ ಡಿವಿಷನ್ ಅಸಿಸ್ಟಂಟ್ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಜಲಸಂಪನ್ಮೂಲ ಇಲಾಖೆ ಕರ್ನಾಟಕ |
ಹುದ್ದೆಗಳ ಹೆಸರು: | ಸೆಕೆಂಡ್ ಡಿವಿಷನ್ ಅಸಿಸ್ಟಂಟ್ (SDA) |
ಒಟ್ಟು ಹುದ್ದೆಗಳು | 155 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಜಲಸಂಪನ್ಮೂಲ ಇಲಾಖೆಯ ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ , 10+2, ಡಿಪ್ಲೊಮಾ, ಐಟಿಐ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾ೦ಕದ೦ದು
ಅಭ್ಯರ್ಥಿಯು
ಅ) ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.
ಆ) ಗರಿಷ್ಠ ವಯೋಮಿತಿ 40 ವರ್ಷ ಮೀರಿರಬಾರದು.
ಅಭ್ಯರ್ಥಿಗಳ ಜನ್ಮ ದಿನಾ೦ಕವನ್ನು ಅವರ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯ ಅಂಕಪಟ್ಟಿ, ವಿದ್ಯಾರ್ಹತೆಯ ಪ್ರಮಾಣ ಪತ್ರ, ಎಸ್.ಎಸ್.ಎಲ್.ಸಿ. ವರ್ಗಾವಣೆ ಪ್ರಮಾಣ ಪತ್ರ (ಟಿ.ಸಿ, ಜನ್ಮ ದಿನಾ೦ಕವನ್ನು
ವೇತನಶ್ರೇಣಿ:
ರೂ. 21400-500-22400-550-24600-600-27000-650-29600-750-32600-850-36000-
950-39800-1100-42000 * ವಿಯಮಾನುಸಾರ ಕಾಲಕಾಲಕ್ಕೆ ಅನ್ವಯವಾಗುವ ಇತರೆ
ಭತ್ಯೆಗಳು.
ಇದನ್ನೂ ಓದಿ -ಎಸೆಸೆಲ್ಸಿ ಪಾಸ್ ಆದವರಿಗೆ ಹುಬ್ಬಳ್ಳಿ ರೈಲ್ವೆ ಇಲಾಖೆ ನೇಮಕಾತಿ 2022
ಪಿ೦ಚಣಿ ಸೌಲಭ್ಯ:-
ಸಿವಿಲ್ ಸೇವೆಯಡಿಯ ದ್ವಿಶೀಯದರ್ಜಿ ಸಹಾಯಕರ ಬ್ಯಾಕ್‌ಲಾಗ್ ಹುದ್ದೆಗಳಿಗೆ ಸರ್ಕಾರದ ಆದೇಶ ಸ೦ಖ್ಯೆ: ಎಫ್‌ಡೀಎಸ್‌ಪಿಎಲ್) 04 ಪಿಇಟಿ 2005 ದಿನಾ೦ಕ: 31-03-2006ರ೦ತೆ ನೂತನ ಪಿ೦ಚಣಿ ಯೋಜನೆಗೆ ಒಳಪಡುತ್ತಾರೆ (ಎನ್.ಪಿ.ಎಸ್).
ಆಯ್ಕೆ ವಿಧಾನ:
1 – ಮೇಲೆ ಹೇಳಿದ ನಿಯಮಾವಳಿಗಳಲ್ಲಿ ನಿಗದಿಪಡಿಸಿರುವ೦ತೆ ವಯಸ್ಸು ಹಾಗೂ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಪಡೆದ ಅ೦ಕಗಳ ಅರ್ಹತೆ ಆಧಾರದ ಮೇಲೆ ಆಯ್ಕೆಯನ್ನು
ಮಾಡಲಾಗುವುದು.
2 – ಕರ್ನಾಟಕ ನಾಗರಿಕ ಸೇವಾ (ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಿರಿಸಿದ್ದ ಭರ್ತಿಯಾಗದೆ ಖಾಲಿ ಉಳಿದಿರುವ ಹುದ್ದೆಗಳು) (ವಿಶೇಷ ನೇವಕಾತಿ) ನಿಯಮಾವಳಿಗಳು, 2001ರನ್ವಯ, ಮೇಲ್ಕಂಡ ಹುದ್ದೆಗಳಿಗೆ ನಿಗದಿಪಡಿಸಲಾದ ವಿದ್ಯಾರ್ಹತೆಯಲ್ಲಿ ಅಭ್ಯರ್ಥಿಗಳು ಗಳಿಸಲಾಗಿರುವ ಒಟ್ಟು ಅ೦ಕಗಳ ಶೇಕಡವಾರನ್ನು ಆಧರಿಸಿ 18 ವರ್ಷದಿ೦ದ 28 ವರ್ಷ ವಯೋಯಿತಿಯುಳ್ಳ (29 ವರ್ಷದೊಳಗಿನವರು) ಅಭ್ಯರ್ಥಿಗಳ ಒ೦ದು ಅರ್ಹತಾ ಪಟ್ಟಿಯನ್ನು ಹಾಗೂ 29 ವರ್ಷದಿ೦ದ 40 ವರ್ಷ ವಯೋಮಿತಿಯುಳ್ಳ ಅಭ್ಯರ್ಥಿಗಳ ಮತ್ತೊಂದು ಅರ್ಹತಾ ಪಟ್ಟಿಯನ್ನು ತಯಾರಿಸಲಾಗುವುದು. 29 ವರ್ಷದಿ೦ದ 40 ವರ್ಷ ವಯೋಮಿತಿಯುಳ್ಳ ಅಭ್ಯರ್ಥಿಗಳ ಅರ್ಹತಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಸದರಿ
ಅರ್ಹತಾ ಪಟ್ಮಿಯಲ್ಲಿ ಸೂಕ್ತ ಅರ್ಹ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ ಮಾತ್ರ 18 ವರ್ಷದಿ೦ದ 28 ವರ್ಷಗಳ ವಯೋಮಿತಿಯ ಅರ್ಹತಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳಿಗೆ ನಂತರದ ಆದ್ಯತೆ ನೀಡಲಾಗುವುದು.
- ಮೊದಲನೆಯದಾಗಿ ಜಲಸಂಪನ್ಮೂಲ ಇಲಾಖೆ ಕರ್ನಾಟಕ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
- ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
- ಜಲಸಂಪನ್ಮೂಲ ಇಲಾಖೆ ಕರ್ನಾಟಕ ಬ್ಯಾಕ್‌ಲಾಗ್ ಎರಡನೇ ವಿಭಾಗದ ಸಹಾಯಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ – ಕೆಳಗೆ ನೀಡಲಾಗಿದೆ ಲಿಂಕ್.
- ಆನ್‌ಲೈನ್ ಅರ್ಜಿ ನಮೂನೆಯ ಮೂಲಕ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ.
- ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ) - ಜಲಸಂಪನ್ಮೂಲ ಇಲಾಖೆ ಕರ್ನಾಟಕ ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 26-09-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 25-10-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |