ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

10ನೇ ಪಾಸ್ ಆದವರಿಗೆ ಜಿಲ್ಲಾ ಪಂಚಾಯತ್ ನೇಮಕಾತಿ 2022 | Zilla Panchayat Recruitment 2022

ಹಾಸನ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ 2022

 

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹಾಸನ ಜಿಲ್ಲಾ ಪಂಚಾಯ್ತಿಯಲ್ಲಿ ಅಗತ್ಯವಿರುವ ಭೇರ್ ಪೂಟ್ ಟೆಕ್ನೀಷಿಯನ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ಹುದ್ದೆ: ಭೇರ್ ಪೂಟ್ ಟೆಕ್ನೀಷಿಯನ್ಸ್ (ಬಿ.ಎಫ್.ಟಿ)

ಉದ್ಯೋಗ ಸ್ಥಳ : ಹಾಸನ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಾಸನ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಒಟ್ಟು ಹುದ್ದೆಗಳ ಸಂಖ್ಯೆ :  ಹಾಸನ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಒಟ್ಟು 16 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಹಾಸನ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಸ್.ಎಸ್.ಎಲ್.ಸಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಿತಿ: ಹಾಸನ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಗರಿಷ್ಠ 45 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಅನುಭವ : ಹಾಸನ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಸಕ್ರಿಯ ಕೆಲಸಗಾರನಾಗಿರಬೇಕು. (ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಸಕ್ರಿಯ ಕೆಲಸಗಾರರು ಎಂದರೆ ಸದರಿ ವ್ಯಕ್ತಿಯು ಹಿಂದಿನ 3 ವರ್ಷಗಳಲ್ಲಿ ಕನಿಷ್ಠ 2 ವರ್ಷಗಳಲ್ಲಿ 25 ದಿನಗಳಿಗೆ ಕಡಿಮೆ ಇಲ್ಲದಷ್ಟು ಯೋಜನೆಯಡಿ ಕೂಲಿಗಾರರಾಗಿ ಕೆಲಸ ಮಾಡಿರಬೇಕು)

 

 

ಹಾಸನ ಜಿಲ್ಲಾ ಪಂಚಾಯ್ತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಹಾಸನ ಜಿಲ್ಲಾ ಪಂಚಾಯ್ತಿಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ : ಹಾಸನ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 06, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 20, 2022

ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್ಪಿ ಡಿಎಫ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ  ಲಿಂಕ್  ಇಲ್ಲಿ ಕ್ಲಿಕ್ ಮಾಡಿ

 

 

ಉದ್ಯೋಗ ಬಿಂದು ಕಳೆದ ಐದು ವರ್ಷಗಳಿಂದ ಸತತವಾಗಿ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಮಾಹಿತಿ ನೀಡುತ್ತಾ ಬಂದಿದೆ, ನಿಮ್ಮೆಲ್ಲಾ ಪ್ರೀತಿ ಆಶೀರ್ವಾದದಿಂದ ಉದ್ಯೋಗ ಬಿಂದು ಸಾಕಷ್ಟು ಜನಪ್ರಿಯ ಕೂಡ ಆಗಿದೆ, ಉದ್ಯೋಗ ಬಿಂದು ಓದುಗರಿಗೆ ನಾವು ಒದಗಿಸುವ ಉದ್ಯೋಗ ಮಾಹಿತಿಯ ನಿಮಗೆ ಇಷ್ಟವಾದಲ್ಲಿ ತಾವು ನಮ್ಮನ್ನು ಯುಟ್ಯೂಬ್ ಚಾನೆಲ್ ನಲ್ಲಿ ಹಾಗು ಫೇಸ್ ಬುಕ್ ನಲ್ಲಿ ಮತ್ತು ಟೆಲಿಗ್ರಾಮ್ ಗ್ರೂಪ್ ನಲ್ಲಿ ಕೂಡ ಉದ್ಯೋಗ ಮಾಹಿತಿಗಾಗಿ ನಮ್ಮನ್ನು ಫಾಲೋ ಮಾಡಬಹುದು.

ದಿನನಿತ್ಯ ಹತ್ತು ಹಲವಾರು ಉದ್ಯೋಗ ಸುದ್ದಿ ನಿಮಗಾಗಿ ನಾವು ಹೊತ್ತು ತರುತ್ತವೆ. ಸಾಕಷ್ಟು ಜನಮನ್ನಣೆ ಪಡೆದಿರುವ ಉದ್ಯೋಗ ಬಿಂದು ಕರ್ನಾಟಕದ ಪ್ರತಿಯೊಂದು ಮನೆಯ ಉದ್ಯೋಗಾಕಾಂಕ್ಷಿಯ ಮನೆಮಾತಾಗಿರುವ ಸುಳ್ಳಲ್ಲ, ಹೀಗೆ ಎಲ್ಲರೂ ನಮ್ಮನ್ನು ಆಶೀರ್ವದಿಸಿ ಮತ್ತು ಪ್ರೋತ್ಸಾಹಿಸಿ ಮುನ್ನಡೆಸಬೇಕಾಗಿದೆ ಕೋರುತ್ತೇವೆ, ಇಂತಿ ನಿಮ್ಮ ನೆಚ್ಚಿನ ಉದ್ಯೋಗ ಬಿಂದು

 

close button